ನಟಿಯ ಮೇಲೆ ಲೈಂಗಿಕ ಕಿರುಕುಳ ಪ್ರಕರಣ: ಮಲಯಾಳಂ ನಟ ದಿಲೀಪ್ ಖುಲಾಸೆ - Mahanayaka
11:17 PM Wednesday 10 - December 2025

ನಟಿಯ ಮೇಲೆ ಲೈಂಗಿಕ ಕಿರುಕುಳ ಪ್ರಕರಣ: ಮಲಯಾಳಂ ನಟ ದಿಲೀಪ್ ಖುಲಾಸೆ

dileep malayalam actor
08/12/2025

ಕೊಚ್ಚಿ: ಬಹುಭಾಷಾ ನಟಿಯೊಬ್ಬರ ಮೇಲೆ 2017ರಲ್ಲಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ ಅವರನ್ನು ಕೇರಳ ಹೈಕೋರ್ಟ್‌ ಸೋಮವಾರ ಖುಲಾಸೆಗೊಳಿಸಿದೆ.

ಪ್ರಮುಖ ಆರೋಪಿಯಾಗಿದ್ದ ಸುನೀಲ್ ಎನ್.ಎಸ್.ಅಲಿಯಾಸ್ ಪಲ್ಸರ್ ಸುನಿ ಸೇರಿದಂತೆ 6 ಜನರನ್ನು ತಪ್ಪಿತಸ್ಥರು ಎಂದು ಕೋರ್ಟ್ ತೀರ್ಪು ನೀಡಿದೆ.

ನಟ ದಿಲೀಪ್‌ ಅವರನ್ನು ಹೊರತುಪಡಿಸಿ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಇನ್ನೂ ಮೂವರನ್ನು ಕೂಡ ನಿರಾಪರಾಧಿಗಳು ಎಂದು ಹೈಕೋರ್ಟ್‌ನ ನ್ಯಾ. ಹನಿ ಎಂ ವರ್ಗೀಸ್ ಅವರು ತೀರ್ಪು ನೀಡಿದ್ದಾರೆ.

2017ರಲ್ಲಿ ತಮಿಳು, ತೆಲುಗು ಹಾಗೂ ಮಲಯಾಳ ಭಾಷೆಯಲ್ಲಿ ನಟಿಸಿದ್ದ ನಟಿಯೊಬ್ಬರ ಕಾರನ್ನು ಅಪಹರಿಸಿ, ಅವರ ಮೇಲೆ ಲೈಂಗಿಕ ಕಿರುಕುಳ ನೀಡಲಾಗಿತ್ತು ಎಂದು ದೂರು ನೀಡಲಾಗಿತ್ತು. ನಟ ದಿಲೀಪ್‌ ಸೇರಿದಂತೆ 10 ಜನರ ಮೇಲೆ ಪ್ರಕರಣ ದಾಖಲಾಗಿತ್ತು. ನಂತರ ನಟ ದಿಲೀಪ್‌ ಅವರು ನಂತರ ಜಾಮೀನಿನ ಮೇಲೆ ಹೊರಬಂದಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ