ಖ್ಯಾತ ನಟನ ಕಾರು ಅಪಘಾತ: ಕಣ್ಣೆದುರೇ ನಟನ ತಂದೆಯ ದಾರುಣ ಸಾವು - Mahanayaka

ಖ್ಯಾತ ನಟನ ಕಾರು ಅಪಘಾತ: ಕಣ್ಣೆದುರೇ ನಟನ ತಂದೆಯ ದಾರುಣ ಸಾವು

shine tom chacko
06/06/2025


Provided by

ಕೊಯಮತ್ತೂರು: ಮಲಯಾಳಂ ನಟ ಶೈನ್ ಟಾಮ್ ಚಾಕೊ ತನ್ನ ಕುಟುಂಬದ ಜೊತೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿದ್ದು, ಅವರ ತಂದೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಟ ಚಾಕೋ ಸೇರಿದಂತೆ ಅವರ ಕುಟುಂಬಸ್ಥರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಧರ್ಮಪುರಿ ಜಿಲ್ಲೆಯ ಪಾಲಕೋಡ್ ಬಳಿ ನಿಂತಿದ್ದ ಟ್ರಕ್‌ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದ್ದು, ನಟ ಶೈನ್ ಟಾಮ್ ಚಾಕೊ(41) ಗಂಭೀರವಾಗಿ ಗಾಯಗೊಂಡಿದ್ದಾರೆ.

ನಟ ಶೈನ್ ಟಾಮ್ ಚಾಕೊ ಮತ್ತು ಅವರ ಕುಟುಂಬ ಸದಸ್ಯರು ತಮ್ಮ ತಂದೆ ಸಿಪಿ ಚಾಕೊ ಅವರ ವೈದ್ಯಕೀಯ ತಪಾಸಣೆಗಾಗಿ ಕಾರಿನಲ್ಲಿ ತ್ರಿಶೂರ್‌ ನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಧರ್ಮಪುರಿ ಜಿಲ್ಲೆಯ ಪಾಲಕೋಡ್‌ ನ ಪರಯೂರ್ ಬಳಿ ಕಾರು ಪ್ರಯಾಣಿಸುತ್ತಿದ್ದಾಗ, ಚಾಲಕ ಅನಿಸ್ (42) ಕಾರಿನ ನಿಯಂತ್ರಣ ತಪ್ಪಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದರು. ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ನಟನ ತಂದೆ ಚಾಕೊ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ನಟ ಶೈನ್, ಅವರ ಸಹೋದರ ಜೋ ಜಾನ್ ಚಾಕೊ ಮತ್ತು ನಟನ ಮ್ಯಾನೇಜರ್ ಅನಿಸ್ ಗಾಯಗೊಂಡಿದ್ದಾರೆ. ಮಾಹಿತಿ ಪಡೆದ ಪಾಲಕೋಡ್ ಪೊಲೀಸರು ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ರಕ್ಷಿಸಿ, ಚಿಕಿತ್ಸೆಗಾಗಿ ಧರ್ಮಪುರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದರು.

ಚಾಕೊ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಧರ್ಮಪುರಿ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ