ಮೋದಿ ಪ್ರಮಾಣ ವಚನಕ್ಕೆ ಮಾಲ್ಡೀವ್ಸ್ ಅಧ್ಯಕ್ಷರಿಗೆ ಆಹ್ವಾನ: ಅನೇಕ ದೇಶಗಳ ಮುಖ್ಯಸ್ಥರಿಗೂ ಆಹ್ವಾನ - Mahanayaka
10:54 AM Friday 19 - December 2025

ಮೋದಿ ಪ್ರಮಾಣ ವಚನಕ್ಕೆ ಮಾಲ್ಡೀವ್ಸ್ ಅಧ್ಯಕ್ಷರಿಗೆ ಆಹ್ವಾನ: ಅನೇಕ ದೇಶಗಳ ಮುಖ್ಯಸ್ಥರಿಗೂ ಆಹ್ವಾನ

08/06/2024

ಮೂರನೇ ಅವಧಿಗೆ ಪ್ರಧಾನಿಯಾಗಿ ಮೋದಿ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗಿಯಾಗಲು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝುರಿಗೆ ಆಹ್ವಾನ ನೀಡಲಾಗಿದ್ದು, ಆಹ್ವಾನವನ್ನು ಮುಯಿಝು ಸ್ವೀಕರಿಸಿದ್ದಾರೆ ಎಂದು ಮಾಲ್ಡೀವ್ಸ್ ಅಧ್ಯಕ್ಷರ ಕಚೇರಿ ತಿಳಿಸಿದೆ. ಚೀನಾ ಪರವಾದ ನಿಲುವು ಹೊಂದಿದ್ದ ಮುಯಿಝು ಭಾರತದಿಂದ ಅಂತರ ಕಾಯ್ದುಕೊಂಡಿದ್ದರು.

ಚೀನಾ ಪರವಾದ ನಿಲುವು ಹೊಂದಿದ್ದ ಮುಯಿಝು ಕಳೆದ ವರ್ಷ ನವೆಂಬರ್ 17ರಂದು ಮಾಲ್ಡೀವ್ಸ್‌ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. ಅವರು ಈ ವರ್ಷದ ಜನವರಿಯಲ್ಲಿ ತನ್ನ ಮೊದಲ ವಿದೇಶಿ ಭೇಟಿಯಲ್ಲಿ ಮೊದಲು ಟರ್ಕಿ ಮತ್ತು ಚೀನಾಕ್ಕೆ ಭೇಟಿ ನೀಡಿದ್ದರು. ಅಲ್ಲದೇ ಮಾಲ್ಡೀವ್ಸ್‌ನಿಂದ ಸುಮಾರು 88 ಭಾರತೀಯ ಸೇನಾ ಸಿಬ್ಬಂದಿಯನ್ನು ಹಿಂಪಡೆಯುವಂತೆ ಭಾರತವನ್ನು ಒತ್ತಾಯಿಸಿದ್ದರು. ಇದು, ಎರಡು ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧದಲ್ಲಿ ಬಿರುಕಿಗೆ ಕಾರಣವಾಗಿತ್ತು. ಪ್ರತಿಯಾಗಿ, ಭಾರತೀಯರು ‘ಬಾಯ್ಕಾಟ್ ಮಾಲ್ಡೀವ್ಸ್‌’ ಅಭಿಯಾನ ನಡೆಸಿದ್ದರು.

ಭಾನುವಾರ ನಡೆಯಲಿರುವ ಪ್ರಧಾನಿ ಮೋದಿಯವರ ಪ್ರಮಾಣ ವಚನ ಸಮಾರಂಭದಲ್ಲಿ ಶ್ರೀಲಂಕಾ, ಮಾಲ್ಡೀವ್ಸ್, ಬಾಂಗ್ಲಾದೇಶ, ಮಾರಿಷಸ್, ನೇಪಾಳ ಮತ್ತು ಭೂತಾನ್ ರಾಷ್ಟ್ರಗಳ ಮುಖ್ಯಸ್ಥರು ಭಾಗವಹಿಸಲಿದ್ದಾರೆ. ” “ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು, ಸೆಶೆಲ್ಸ್ ಉಪಾಧ್ಯಕ್ಷ ಅಹ್ಮದ್ ಅಫೀಫ್, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶನಿವಾರ ತಿಳಿಸಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ