ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರಕ್ಕೆ ನೂತನ ಕಾರ್ಯದರ್ಶಿ

18/08/2023
ಚಾಮರಾಜನಗರ: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯನ್ನಾಗಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸರಸ್ವತಿ ರವರನ್ನು ನೇಮಕ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯಾಗಿದ್ದ ಸರಸ್ವತಿರವರನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಮುಂದಿನ ಆದೇಶದವರೆಗೆ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿ ಗೀತಾ ಹುಡೇದ ರವರ ಜಾಗಕ್ಕೆ ವರ್ಗಾಯಿಸಿ ಆದೇಶಿಸಲಾಗಿದೆ.