ಪ್ರತಿಪಕ್ಷಗಳ ಮಹಾ ಮೈತ್ರಿಕೂಟಕ್ಕೆ ‘ಇಂಡಿಯಾ’ ಎಂದು ನಾಮಕರಣ: ಕೇಸರಿ ಪಾಳಯಕ್ಕೆ ಠಕ್ಕರ್ ನೀಡಲು ಟೀಂ ರೆಡಿ

18/07/2023

ಪ್ರತಿಪಕ್ಷಗಳ ಮಹಾ ಮೈತ್ರಿಕೂಟಕ್ಕೆ ‘ಇಂಡಿಯನ್​ ನ್ಯಾಷನಲ್ ಡೆಮಾಕ್ರಟಿಕ್​​ ಇನ್​ಕ್ಲೂಸಿವ್​​​​ ಅಲೈನ್ಸ್ (INDIA / Indian National Developmental Inclusive Alliance) ಎಂದು ನಾಮಕರಣ ಮಾಡಿರುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಮಹಾಘಟಬಂಧನ್ ಸಭೆಯ ಬಳಿಕ ಖರ್ಗೆ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ನಾಯಕರು ಈ ನಿರ್ಧಾರ ಘೋಷಿಸಿದ್ದಾರೆ. ಭಾರತದ ಪ್ರಜಾಪ್ರಭುತ್ವ ಉಳಿವಿಗೆ ನಮ್ಮ ಹೋರಾಟ ನಡೆಯುತ್ತಿದೆ. ಒಂದೇ ಧ್ವನಿಯಲ್ಲಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದು ಖರ್ಗೆ ತಿಳಿಸಿದರು.

26 ಪಕ್ಷಗಳ ನಾಯಕರು ಸಭೆಯಲ್ಲಿ ಭಾಗಿಯಾಗಿ ಈ ನಿರ್ಧಾರಕ್ಕೆ ಬಂದಿದ್ದೇವೆ. 11 ಜನರ ಸಮಿತಿ ರಚನೆ ಮಾಡಲು ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದೇವೆ. ಈ 11 ಜನರ ಹೆಸರು ಸದ್ಯದಲ್ಲೇ ಘೋಷಣೆ ಮಾಡುತ್ತೇವೆ. ಮಹಾರಾಷ್ಟ್ರ, ಮುಂಬೈನಲ್ಲಿ ಮತ್ತೆ ಸಭೆ ಸೇರಲಿದ್ದೇವೆ. ಕ್ಯಾಂಪೇನ್ ಮ್ಯಾನೇಜ್ಮೆಂಟ್​​ಗೆ ಕಾರ್ಯದರ್ಶಿ ನೇಮಕ ಮಾಡಲಾಗುವುದು. ದೆಹಲಿಯಲ್ಲಿ ಈ ಬಗ್ಗೆ ನಾವು ನಿರ್ಧಾರ ಕೈಗೊಳ್ಳಲಿದ್ದೇವೆ. ಮುಂಬೈನಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಖರ್ಗೆ ತಿಳಿಸಿದರು.

ಕೇಂದ್ರದ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದೆ. ಸಂವಿಧಾನವನ್ನು ಕೂಡ ನಾಶ ಮಾಡುತ್ತಿದೆ. ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಖರ್ಗೆ ಕಿಡಿಕಾರಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version