12:50 PM Thursday 23 - October 2025

ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಜೀವ ಬೆದರಿಕೆ

08/02/2021

ನವದೆಹಲಿ:  ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಲಾಗಿದ್ದು,  “ಮೋದಿಯ ವಿರುದ್ಧ ಹೇಳಿಕೆ ನೀಡಿದರೆ ಸುಮ್ಮನೆ ಬಿಡುವುದಿಲ್ಲ” ಎಂದು ಬೆದರಿಕೆ ಹಾಕಲಾಗಿದೆ.

ಕಾಂಗ್ರೆಸ್ ಪಕ್ಷದ ಸಂಸದ ನಾಸಿರ್ ಹುಸೇನ್ ದೆಹಲಿಯಲ್ಲಿ ಈ ಕುರಿತು ಮಾಹಿತಿ ನೀಡಿದ್ದು,  ಪ್ರಧಾನಿ ನರೇಂದ್ರ ಮೋದಿ ಭಾಷಣದ ನಂತರ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಸಲಾಗಿತ್ತು. ಸುದ್ದಿಗೋಷ್ಠಿಯಲ್ಲಿ ಖರ್ಗೆ ಪ್ರಧಾನಿ ಮೋದಿ ಅವರನ್ನು ಟೀಕಸಿದ್ದರು. ಇದರ ಬೆನ್ನಿಗೆ  ಬೆದರಿಕೆ ಕರೆ ಬಂದಿದೆ.

ಬೆದರಿಕೆ ಕರೆಯು ಮಧ್ಯಪ್ರದೇಶದಿಂದ ಬಂದಿದೆ ಎಂದು ಹೇಳಲಾಗಿದ್ದು, ನಾವು ಮೋದಿಯ ಅಭಿಮಾನಿಗಳು, ಪ್ರಧಾನಿ ಮೋದಿ ವಿರುದ್ಧ ಟೀಕೆ ಮಾಡಬಾರದು. ಮಾಡಿದರೆ, ಸುಮ್ಮನೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಲಾಗಿದೆ. ಅಲ್ಲದೇ, ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ ಎಂದು ತಿಳಿದು ಬಂದಿದೆ.

ಖರ್ಗೆ ಅವರಿಗೆ ಅನೇಕ ಬಾರಿ ಜೀವ ಬೆದರಿಕೆ ಕರೆ ಬಂದಿದ್ದು, ಎಫ್‌ ಐಆರ್ ದಾಖಲಿಸಲಾಗಿತ್ತು. ಆದರೆ, ಯಾವುದೇ ಕ್ರಮ ಜರುಗಿಸಿಲ್ಲ. ನಾವು ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ. ಈಗಲೂ ದೂರು ನೀಡುತ್ತೇವೆ ಎಂದು ನಾಸಿರ್ ಹುಸೇನ್ ತಿಳಿಸಿದ್ದಾರೆ.

 

ಇತ್ತೀಚಿನ ಸುದ್ದಿ

Exit mobile version