ಮಲ್ಪೆ ಬಂದರಿನ ಧಕ್ಕೆ ನೀರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
ಮಲ್ಪೆ ಬಂದರಿನ ಧಕ್ಕೆ ನೀರಿನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ಭಾನುವಾರ ರಾತ್ರಿ ನಡೆದಿದೆ.
ವ್ಯಕ್ತಿಯು ಆಕಸ್ಮಿಕವಾಗಿ ಕಾಲುಜಾರಿ ಧಕ್ಕೆ ನೀರಿಗೆ ಬಿದ್ದಿದ್ದು, ಧಕ್ಕೆಯಲ್ಲಿ ಹೂಳು ತುಂಬಿರುವುದರಿಂದ ಮೇಲೆ ಬರಲು ಆಗದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ವ್ಯಕ್ತಿಯ ಹೆಸರು, ವಿಳಾಸ ಪತ್ತೆಯಾಗಿಲ್ಲ.
ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು, ಮೃತದೇಹವನ್ನು ಸ್ಥಳೀಯರ ಸಹಕಾರದೊಂದಿಗೆ ಮೇಲೆತ್ತಿದರು. ಮೃತದೇಹವನ್ನು ಉಡುಪಿ ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ಸ್ಥಳಕ್ಕೆ ಮಲ್ಪೆ ಠಾಣೆ ಪೊಲೀಸರು ಆಗಮಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka




























