ಮಲ್ಪೆ ಪೊಲೀಸ್ ಠಾಣೆಯ ಎಎಸ್ ಐ ಹೃದಯಾಘಾತಕ್ಕೆ ಬಲಿ
ಮಲ್ಪೆ: ಮಲ್ಪೆ ಪೊಲೀಸ್ ಠಾಣೆಯ ಸಹಾಯಕ ಉಪ ನಿರೀಕ್ಷಕ(ಎಎಸ್ ಐ)ವೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.
ವಿಶ್ವನಾಥ್(56) ಮೃತಪಟ್ಟವರಾಗಿದ್ದಾರೆ. ವರದಿಗಳ ಪ್ರಕಾರ, ಮಲ್ಪೆ ಠಾಣೆಯ ಸಿಬ್ಬಂದಿಗೆ ಹಮ್ಮಿಕೊಳ್ಳಲಾಗಿದ್ದ ಬೀಳ್ಕೊಡುಗೆ ಕಾರ್ಯಕ್ರಮದ ವೇಳೆ ಹಾಡುತ್ತಿದ್ದ ವೇಳೆ ಅವರು ಏಕಾಏಕಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದರು.
ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷಿಸಿದ ನಂತರ ವಿಶ್ವನಾಥ್ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಹಲವು ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ವಿಶ್ವನಾಥ್ ಅವರು ಇತ್ತೀಚೆಗೆ ಮಲ್ಪೆ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD
























