ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

k y nanjegowda
14/10/2025

ಬೆಂಗಳೂರು: ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರ ಕಾಂಗ್ರೆಸ್‌ ಶಾಸಕ ಕೆ.ವೈ.ನಂಜೇಗೌಡ ಅವರ ಶಾಸಕ ಸ್ಥಾನ ರದ್ದುಗೊಳಿಸಿ ಹೈಕೋರ್ಟ್ ಕೊಟ್ಟಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದು, ಮರುಮತ ಎಣಿಕೆ ಮಾಡಲು ಮಹತ್ವದ ಸೂಚನೆ ನೀಡಿದೆ.

ಹೈಕೋರ್ಟ್‌ ಶಾಸಕ ಸ್ಥಾನ ರದ್ದು ಮಾಡಿದ್ದನ್ನು ಪ್ರಶ್ನೆ ಮಾಡಿ ಕೆ.ವೈ.ನಂಜೇಗೌಡ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನ ನ್ಯಾ. ಸೂರ್ಯಕಾಂತ್‌ ಹಾಗೂ ನ್ಯಾ. ಜೊಯಮಲ್ಯ ಬಾಗ್ಚಿ ಅವರ ಪೀಠದಿಂದ ವಿಚಾರಣೆ ನಡೆಸಲಾಯಿತು. ಈ ವೇಳೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದ ಮತ ಎಣಿಕೆಯಲ್ಲಿ ಅಕ್ರಮ ಪ್ರಕರಣದಲ್ಲಿ ಸೆಪ್ಟೆಂಬರ್ 16 ರಂದು ಕರ್ನಾಟಕ ಹೈಕೋರ್ಟ್‌ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಕೆ.ವೈ.ನಂಜೇಗೌಡ ಆಯ್ಕೆಯನ್ನು ರದ್ದುಪಡಿಸಿತ್ತು. ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ನಂಜೇಗೌಡರಿಗೆ ಒಂದು ತಿಂಗಳ ಅವಕಾಶ ನೀಡಿತ್ತು. ಹೀಗಾಗಿ ಅವರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು.

ಮರು ಮತ ಎಣಿಕೆಗೆ ಸೂಚನೆ ನೀಡಿರುವ ಸುಪ್ರೀಂ ಕೋರ್ಟ್‌ ಫಲಿತಾಂಶವನ್ನು ಯಾವುದೇ ಕಾರಣಕ್ಕೂ ಪ್ರಕಟ ಮಾಡದೇ ಮುಚ್ಚಿದ ಲಕೋಟೆಯಲ್ಲಿ ಕೋರ್ಟ್‌ಗೆ ಸಲ್ಲಿಸುವಂತೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗೆ ಸುಪ್ರೀಂ ಕೋರ್ಟ್ ಸೂಚನೆ ಕೊಟ್ಟಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version