ಮಾಂಸಾಹಾರಿಗಳ ವೋಟು ಬೇಡ ಎಂದು ತಾಕತ್ ಇದ್ರೆ ಹೇಳಿ: ಬಿಜೆಪಿಗೆ ದಿನೇಶ್ ಗುಂಡೂರಾವ್ ಸವಾಲು - Mahanayaka

ಮಾಂಸಾಹಾರಿಗಳ ವೋಟು ಬೇಡ ಎಂದು ತಾಕತ್ ಇದ್ರೆ ಹೇಳಿ: ಬಿಜೆಪಿಗೆ ದಿನೇಶ್ ಗುಂಡೂರಾವ್ ಸವಾಲು

dinesh gundu rao
23/08/2022

ಬೆಂಗಳೂರು:  ಮಾಂಸಾಹಾರಿಗಳ ವೋಟು ನಮಗೆ ಬೇಡ ಎಂದು ಬಿಜೆಪಿಯವರು ತಾಕತ್ ಇದ್ರೆ ಹೇಳಲಿ ಎಂದು ಬಿಜೆಪಿ ನಾಯಕರಿಗೆ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಸವಾಲು ಹಾಕಿದ್ದಾರೆ.

ಸಿದ್ದರಾಮಯ್ಯ ಮಾಂಸಾಹಾರ ಮಾಡಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ತಿರುಗೇಟು ನೀಡಿದ ಅವರು, ಮಾಂಸಾಹಾರ ಸೇವನೆಗೆ ಸಂಬಂಧಿಸಿದಂತೆ ಬಿಜೆಪಿಯುವರು ಕೀಳು ಮಟ್ಟದ ರಾಜಕಾರಣ ಮಾಡುತ್ತಿದ್ದಾರೆ. ಯಾರು ಏನನ್ನು ತಿನ್ನಬೇಕು, ತಿನ್ನ ಬಾರದು ಎನ್ನುವುದನ್ನು ಬಿಜೆಪಿಯವರು ನಿರ್ಧರಿಸಬೇಕೇ? ಇದನ್ನು ಕೇಳಲು ಬಿಜೆಪಿಯವರಿಗೆ ಅಧಿಕಾರ ಕೊಟ್ಟವರು ಯಾರು ಎಂದು ಅವರು ಪ್ರಶ್ನಿಸಿದರು.

ಬೇಡರ ಕಣ್ಣಪ್ಪ ಶಿವಲಿಂಗಕ್ಕೆ ಮಾಂಸದ ನೈವೇದ್ಯ ಇಟ್ಟ. ಶಿವ ಕಣ್ಣಪ್ಪನಿಗೆ ಒಲಿಯಲಿಲ್ಲವೆ? ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯಪಡಬೇಡ, ತನ್ನ ಬಣ್ಣಿಸಬೇಡ, ಇದಿರ ಹಳಿಯಲುಬೇಡ, ಇದೇ ಅಂತರಂಗ-ಶುದ್ಧಿ, ಇದೇ ಬಹಿರಂಗ-ಶುದ್ಧಿ, ಇದೇ ಕೂಡಲಸಂಗಮನೊಲಿಸುವ ಪರಿ! ಎಂದಿದ್ದಾರೆ ಬಸವಣ್ಣ. ಭಕ್ತಿ ಶುದ್ಧವಾಗಿರಬೇಕು ಎಂದು ಅವರು ಹೇಳಿದರು.

ಸಿದ್ದರಾಮಯ್ಯನವರನ್ನು ಕಂಡರೆ BJPಯವರಿಗೆ ನವರಂಧ್ರಗಳಲ್ಲೂ ನಡುಕ ಶುರುವಾಗಿದೆ. ಹಾಗಾಗಿ ಅವರು ಏನು ತಿನ್ನುತ್ತಾರೆ, ಏನು ಉಡುತ್ತಾರೆ ಎಂದು ವಿವಾದ ಸೃಷ್ಟಿಸಿ ರಾಜಕೀಯ ಮಾಡುತ್ತಿದ್ದಾರೆ. ಮಾಂಸಹಾರ ತಿನ್ನುವುದು ತಪ್ಪಾದರೆ, ಮಾಂಸಹಾರಿಗಳು‌ ನಮ್ಮ ಪಕ್ಷಕ್ಕೆ ಓಟು ಹಾಕುವುದು ಬೇಡ ಎಂದು ಬಿಜೆಪಿಯವರು ಹೇಳಲಿ. ಹೀಗೆ ಹೇಳುವ ತಾಕತ್ತು BJPಯವರಿಗಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ