ಕಾನ್ಸ್ ಟೇಬಲ್ ಮೇಲೆ ಹಲ್ಲೆ ಕೇಸ್: ಮಗ, ತಾಯಿ ವಿರುದ್ಧದ ಪ್ರಕರಣ ರದ್ದು

2017 ರಲ್ಲಿ ಕರ್ತವ್ಯದಲ್ಲಿದ್ದ ಕಾನ್ಸ್ ಟೇಬಲ್ ಮೇಲೆ ಹಲ್ಲೆ ನಡೆಸಿದ ವ್ಯಕ್ತಿ ಮತ್ತು ಅವನ ತಾಯಿಯ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ಬಾಂಬೆ ಹೈಕೋರ್ಟ್ ರದ್ದುಗೊಳಿಸಿದೆ. ಜನವರಿ 26 ರಿಂದ ನಾಲ್ಕು ಭಾನುವಾರಗಳಂದು ಸಮುದಾಯ ಸೇವೆ ಸಲ್ಲಿಸುವಂತೆ ನ್ಯಾಯಾಲಯವು ವ್ಯಕ್ತಿಗೆ ಆದೇಶಿಸಿದೆ.
ಅರ್ಜಿದಾರರ ಪರ ಹಾಜರಾದ ವಕೀಲ ಉದಯ್ ವರುಂಜಿಕರ್, ಇವರಿಬ್ಬರು ಅನುಚಿತವಾಗಿ ವರ್ತಿಸಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ. ಆದರೆ, ಎಫ್ಐಆರ್ , ಬಚಾ ಎಂಬ ವ್ಯಕ್ತಿಗೆ ಕೆಲಸ ಪಡೆಯಲು ಅಡ್ಡಿಯಾಗುವುದರಿಂದ, ಪ್ರಕರಣವನ್ನು ರದ್ದುಗೊಳಿಸುವಂತೆ ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ನ್ಯಾಯಮೂರ್ತಿಗಳಾದ ರವೀಂದ್ರ ವಿ ಘುಗೆ ಮತ್ತು ರಾಜೇಶ್ ಎಸ್ ಪಾಟೀಲ್ ಅವರ ನ್ಯಾಯಪೀಠವು 22 ವರ್ಷದ ಹುಷಾದ್ ನೆವಿಲ್ಲೆ ಬಚಾ ಮತ್ತು ಅವರ ತಾಯಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿತು.
ಬಚಾ 17 ವರ್ಷದವನಾಗಿದ್ದಾಗ ಪರವಾನಗಿ ಮತ್ತು ಹೆಲ್ಮೆಟ್ ಇಲ್ಲದೆ ಮೋಟಾರ್ ಸೈಕಲ್ ಸವಾರಿ ಮಾಡಿದಾಗ ಈ ಘಟನೆ ನಡೆದಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj