22 ವರ್ಷದ ಯುವತಿಯ ಬರ್ಬರ ಹತ್ಯೆ: ವಿವಾಹಿತ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು

jaipur
21/03/2024

ಜೈಪುರ:  22 ವರ್ಷ ವಯಸ್ಸಿನ ಯುವತಿಯೋರ್ವಳನ್ನು ವಿವಾಹಿತ ವ್ಯಕ್ತಿಯೋರ್ವ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ರಾಜಸ್ಥಾನದ ಜೈಪುರದ ಸಾರ್‌ ಮಥುರಾ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ  ಈ ಘಟನೆ ನಡೆದಿದ್ದು, ಇಲ್ಲಿನ ಪಟ್ಟಾರಾ ಕಾಲೋನಿಯ ಬಾಡಿಗೆ ಮನೆಯಲ್ಲಿ ಸೋನು ಶರ್ಮಾ ಪೂನಂ(22) ಎಂಬ ಯುವತಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಇದು ಮೇಲ್ನೋಟಕ್ಕೆ ಪ್ರೇಮ ಪ್ರಕರಣ ಎಂದು ತಿಳಿದು ಬಂದಿದೆ. ಸಂತ್ರಸ್ತ ಮಹಿಳೆ ಅವಿವಾಹಿತಳಾಗಿದ್ದಳು. ಆರೋಪಿ 32 ವರ್ಷ ವಯಸ್ಸಿನವನಾಗಿದ್ದು ವಿವಾಹಿತನಾಗಿದ್ದಾನೆ. ಈತನಿಗೆ ಮಕ್ಕಳು ಕೂಡ ಇದ್ದಾರೆ. ದಾಳಿಯ ಹಿಂದಿನ ನಿಖರ ಕಾರಣಗಳನ್ನು ತನಿಖೆ ನಡೆಸಲಾಗುತ್ತಿದೆ ಎಂದು ಭರತ್‌ ಪುರ ಡಿಎಸ್‌ ಪಿ ಸುನೀಲ್‌ ಕುಮಾರ್‌ ಶರ್ಮಾ ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆಯ ಬಳಿಕ ಯುವತಿಯ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಇದೇ ವೇಳೆ ಡಿಎಸ್‌ ಪಿ ಸುನೀಲ್‌ ಕುಮಾರ್‌ ಶರ್ಮಾ ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version