ನಾಯಿಯನ್ನು ರಕ್ಷಣೆ ಮಾಡಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯ ಬಂಧನ

ಬೆಂಗಳೂರು: ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ವರದಿಗಳ ಪ್ರಕಾರ, ಸೆ.7ರಂದು ರಾತ್ರಿ 11:50ರ ಸುಮಾರಿಗೆ ಈ ಘಟನೆ ನಡೆದಿದೆ. ಯುವತಿ ಕಾರಿನಲ್ಲಿ ಬರುತ್ತಿದ್ದ ವೇಳೆ ಜಕ್ಕೂರು ಮುಖ್ಯರಸ್ತೆಯಲ್ಲಿ ನಾಯಿಯೊಂದು ಅಪಘಾತದಲ್ಲಿ ಗಾಯಗೊಂಡಿತ್ತು ಹೀಗಾಗಿ ಯುವತಿ ನಾಯಿಯನ್ನು ರಕ್ಷಣೆ ಮಾಡಲು ಮುಂದಾಗಿದ್ದರು.
ಬಳಿಕ ಕೈಯಲ್ಲಿ ಆಗಿದ್ದ ರಕ್ತವನ್ನು ಪೆಟ್ರೋಲ್ ಬಂಕ್ ಬಳಿ ತೊಳೆಯುತ್ತಿದ್ದ ವೇಳೆ ಬೈಕ್ ನಲ್ಲಿ ಬಂದಿದ್ದ ಆರೋಪಿ ಬ್ಯಾಡ್ ಟಚ್ ಮಾಡಿ ತೆರಳಿದ್ದ, ಇದಾಗಿ ಸ್ವಲ್ಪ ಹೊತ್ತಿನ ನಂತರ ಮತ್ತೊಮ್ಮೆ ಬಂದು ಯುವತಿಯ ಖಾಸಗಿ ಅಂಗ ಮುಟ್ಟಿ ಕಿರುಕುಳ ನೀಡಿ ಪರಾರಿಯಾಗಿದ್ದಾನೆ.
ಘಟನೆಯಿಂದ ನೊಂದ ಯುವತಿ ಅಮೃತಹಳ್ಳಿ ಠಾಣೆಯಲ್ಲಿ ದೂರು ನೀಡಿದ್ದಳು. ಯುವತಿಯ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಅಮೃತಹಳ್ಳಿ ಠಾಣೆ ಪೊಲೀಸರು ತ್ವರಿತವಾಗಿ ಕ್ರಮಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD