10:01 PM Thursday 21 - August 2025

ರೈಲಲ್ಲಿ ವೃದ್ದನ ಮೇಲೆ ಹಲ್ಲೆ: ಆರೋಪಿಗಳ ಪತ್ತೆಗೆ ಪೊಲೀಸರ ತೀವ್ರ ಶೋಧ

03/09/2024

ರೈಲಲ್ಲಿ ಪ್ರಯಾಣಿಸುತ್ತಿದ್ದ ಹಾಜಿ ಅಶ್ರಫ್ ಮುನಿಯಾರ್ ಎಂಬ ವೃದ್ಧನ ಮೇಲೆ ಹಲ್ಲೆ ನಡೆಸಿದ ಯುವಕರನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ. ಈ ಮೊದಲು ಪೊಲೀಸರು ಅವರನ್ನು ಬಂಧಿಸಿದ್ದರು ಮತ್ತು ನ್ಯಾಯಾಲಯ ಅವರಿಗೆ ತಕ್ಷಣ ಜಾಮೀನು ನೀಡಿತ್ತು. ಆದರೆ ಆ ಬಳಿಕ ಇವರ ವಿರುದ್ಧ ಜಾಮೀನು ರಹಿತ ಪ್ರಕರಣವನ್ನು ದಾಖಲಿಸಲಾಯಿತು. ಇದೀಗ ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ನ್ಯಾಯಾಲಯ ಇವರ ಜಾಮೀನನ್ನು ಸೆಪ್ಟೆಂಬರ್ 2 ಸೋಮವಾರದಂದು ರದ್ದುಗೊಳಿಸಿತು.

72 ವರ್ಷದ ಹಾಜಿ ಅಶ್ರಫ್ ಅವರನ್ನು ಈ ಯುವಕರು ಕ್ರೂರವಾಗಿ ಥಳಿಸುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲಾಗಿತ್ತು. ಗೋಮಾಂಸ ಸಾಗಿಸುತ್ತಿದ್ದಾರೆ ಎಂದು ಆರೋಪಿಸಿ ಯುವಕರು ಈ ವೃದ್ಧರ ಮೇಲೆ ಹಲ್ಲೆ ನಡೆಸಿದ್ದರು. ಈ ಯುವಕರು ಪೋಲಿಸ್ ನೇಮಕಾತಿ ಪರೀಕ್ಷೆಗೆ ಹಾಜರಾಗಲು ರೈಲಿನಲ್ಲಿ ತೆರಳುತ್ತಿದ್ದರು.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version