ಚಪ್ಪಲಿ ಕಳೆದು ಹೋಗಿದೆ ಎಂದು ಪೊಲೀಸರಿಗೆ ದೂರು ನೀಡಿದ ವ್ಯಕ್ತಿ: ಕೊನೆಗೆ ಏನಾಯ್ತು ನೋಡಿ
ಬೆಂಗಳೂರು: 112 ಸಹಾಯವಾಣಿಗೆ ಕರೆ ಮಾಡಿ ಚಪ್ಪಲಿ ಕಳೆದು ಹೋಗಿದೆ, ಹುಡುಕಿಕೊಡಿ ಎಂದು ದೂರಿರುವ ಘಟನೆ ವಿಧಾನಸೌಧ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪೊಲೀಸ್ ನಿಯಂತ್ರಣ ಕೋಣೆಯ ಸಹಾಯವಾಣಿಗೆ ಕರೆ ಮಾಡಿದ್ದ ವ್ಯಕ್ತಿಯೊಬ್ಬ ತಾನು ಕಾರ್ ಸ್ಟ್ರೀಟ್ ನಲ್ಲಿರುವ ಬಾಲಂಭಟ್ಟ ಹಾಲ್ ನಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ, ಹಿಂತಿರುಗಿ ಬಂದು ನೋಡಿದಾಗ ನನ್ನ ಚಪ್ಪಲಿ ಕಳೆದು ಹೋಗಿದೆ, ಹುಡುಕಿಕೊಡಿ ಎಂದು ದೂರು ನೀಡಿದ್ದಾನೆ. ವಿಧಿಯಿರದೇ ಪೊಲೀಸ್ ನಿಯಂತ್ರಣ ಕೋಣೆಯ ಸಿಬ್ಬಂದಿ ಸಮೀಪದಲ್ಲಿ ಬೀಟ್ ನಲ್ಲಿದ್ದ ಹೊಯ್ಸಳ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ತೆರಳಿದ್ದ ಹೊಯ್ಸಳ ಸಿಬ್ಬಂದಿ ದೂರುದಾರನ ಜೊತೆ ಸೇರಿ ಚಪ್ಪಲಿ ಹುಡುಕಾಡಿ ಕೊನೆಗೆ ಚಪ್ಪಲಿ ಸಿಗದ ಕಾರಣ ಠಾಣೆಗೆ ಬಂದು ದೂರು ನೀಡುವಂತೆ ಸೂಚಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























