ಮೊದಲ ಬಲಿ ಪಡೆದ ಮೊದಲ ಮಳೆ: ಸಿಡಿಲು ಬಡಿದು ವ್ಯಕ್ತಿ ಸಾವು

13/04/2024
ಚಿಕ್ಕಮಗಳೂರು: ಚಿಕ್ಕಮಗಳೂರಿನ ವಿವಿಧೆಡೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಇದೀಗ ವರ್ಷದ ಮೊದಲ ಮಳೆ ವ್ಯಕ್ತಿಯೊಬ್ಬರನ್ನು ಮೊದಲ ಬಲಿ ಪಡೆದುಕೊಂಡಿದೆ.
ಎನ್.ಆರ್.ಪುರ ತಾಲೂಕಿನ ಅರಳಿಕೊಪ್ಪದ ಶಂಕರ್ (48) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮಳೆಯ ಸಂದರ್ಭದಲ್ಲಿ ತೋಟಕ್ಕೆ ಹೋಗಿದ್ದ ವೇಳೆ ಸಿಡಿಲು ಬಡಿದಿದ್ದು, ಪರಿಣಾಮವಾಗಿ ಶಂಕರ್ ಮೃತಪಟ್ಟಿದ್ದಾರೆ.
ಸಂಜೆ ಗುಡುಗು, ಮಿಂಚು ಸಹಿತ ಧಾರಾಕಾರವಾಗಿ ಮಳೆ ಸುರಿದಿತ್ತು. ಇದೀಗ ವರ್ಷದ ಮೊದಲ ಮಳೆ ಮೊದಲ ಬಲಿ ಪಡೆದುಕೊಂಡಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth