ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ನಿಂದ ಕುಸಿದು ಬಿದ್ದು ವ್ಯಕ್ತಿ ಸಾವು

01/09/2025

ಮೈಸೂರು: ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ನಿಂದ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ಹರವೆ ಗ್ರಾಮದಲ್ಲಿ ನಡೆದಿದೆ.

ಆಟೋ ರಾಜು(34) ಸಾವನ್ನಪ್ಪಿದವರಾಗಿದ್ದಾರೆ.  ಗ್ರಾಮಸ್ಥರು ಗಣಪತಿ ವಿಸರ್ಜನೆಗಾಗಿ ಟ್ರ್ಯಾಕ್ಟರ್ ಮೂಲಕ ಮೆರವಣಿಗೆ ನಡೆಸುತ್ತಿದ್ದರು. ಈ ವೇಳೆ ಈ ದುರ್ಘಟನೆ ಸಂಭವಿಸಿದೆ.

ಮನೆಯ ಬಳಿಗೆ ಬಂದ ಗಣೇಶ ಮೆರವಣಿಗೆ ವೇಳೆ ಗಣಪನಿಗೆ ಪೂಜೆ ಸಲ್ಲಿಸಲು  ರಾಜು ಟ್ರ್ಯಾಕ್ಟರ್ ಏರಿದ್ದರು. ಈ ವೇಳೆ ಏಕಾಏಕಿ ಟ್ರ್ಯಾಕ್ಟರ್ ನಿಂದ ಕೆಳಗೆ ಬಿದ್ದಿದ್ದರು. ತಕ್ಷಣ ಅವರನ್ನು ಹುಣಸೂರು ಆಸ್ಪತ್ರೆಗೆ ಸಾಗಿಸಲು ಗ್ರಾಮಸ್ಥರು ಮುಂದಾದರು. ಆದ್ರೆ ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.

ಘಟನೆಯ ನಂತರ ಗಣಪತಿ ಮೆರವಣಿಗೆಯನ್ನು ಸ್ಥಗಿತಗೊಳಿಸಲಾಗಿತು. ನೇರವಾಗಿ ಚಿಕ್ಕಕೆರೆಗೆ ಗಣಪತಿಯನ್ನು ವಿಸರ್ಜನೆ ಮಾಡಲಾಯಿತು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version