ಶಾಲಾ ಕ್ರೀಡಾಕೂಟದ ವೇಳೆ ವಿದ್ಯುತ್ ಪ್ರವಹಿಸಿ ವ್ಯಕ್ತಿ ಸಾವು: ಹಲವರಿಗೆ ಗಂಭೀರ ಗಾಯ
10/02/2024
ಗೌರಿ ಬಿದನೂರು: ಶಾಲಾ ಕ್ರೀಡಾಕೂಟದ ವೇಳೆ ನಡೆದ ವಿದ್ಯುತ್ ಅವಘಡದಲ್ಲಿ ವ್ಯಕ್ತಿಯೋರ್ವರು ಸಾವನ್ನಪ್ಪಿ, 18ಕ್ಕೂ ಅಧಿಕ ಮಂದಿಗೆ ಗಾಯವಾಗಿರುವ ಘಟನೆ ಗೌರಿಬಿದನೂರು ನಗರದ ಶ್ರೀರಾಮಕೃಷ್ಣ ಶಾರದಾದೇವಿ ಶಾಲೆಯಲ್ಲಿ ನಡೆದಿದೆ.
ಕಲ್ಲಂಕರಾಯನಕುಂಟೆ ಗ್ರಾಮದಲ್ಲಿನ ಶಾರದಾ ಶಾಲಾ ಕ್ರೀಡಾಕೂಟದ ಕಾರ್ಯಕ್ರಮಕ್ಕೆ ಹಾಕಿದ್ದ ಪೆಂಡಲ್ ಗಾಳಿಗೆ ಹಾರಿ ವಿದ್ಯುತ್ ತಂತಿಗಳಿಗೆ ಸ್ಪರ್ಶಿಸಿದೆ. ಹೀಗಾಗಿ ಪೆಂಡಲ್ ಕೆಳಗೆ ಇದ್ದ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ವಿದ್ಯುತ್ ಪ್ರವಹಿಸಿದೆ.
ಘಟನೆಯಲ್ಲಿ ನಾಗೇನಹಳ್ಳಿ ನಿವಾಸಿ ರಾಘವೇಂದ್ರ ಎಂಬುವರು ಮೃತಪಟ್ಟಿದ್ದಾರೆ. ಇನ್ನು 18ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ಆಸ್ಪತ್ರೆಗ ದಾಖಲು ಮಾಡಲಾಗಿದೆ.
ಗಾಯಾಳುಗಳ ಪೈಕಿ ನಾಲ್ವರು ವಿದ್ಯಾರ್ಥಿಗಳು, ಇಬ್ಬರು ಪೋಷಕರು ಹಾಗೂ ಇಬ್ಬರು ಶಿಕ್ಷಕರು ಗಂಭೀರವಾಗಿ ಗಾಯಗೊಂಡಿದ್ದಾರೆ.