ಆನೆ ದಾಳಿಗೆ ವ್ಯಕ್ತಿಯ ಭೀಕರ ಸಾವು | ಅರಣ್ಯ ಇಲಾಖೆ ವಿರುದ್ಧ ಆಕ್ರೋಶ
30/11/2024
ಚಿಕ್ಕಮಗಳೂರು: ಆನೆ ದಾಳಿಗೆ ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಎನ್.ಆರ್.ಪುರ ತಾಲೂಕಿನ ಸೀತೂರು ಗ್ರಾಮದಲ್ಲಿ ನಡೆದಿದೆ.
ಉಮೇಶ್ (56) ಮೃತದುರ್ದೈವಿ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ್ದು, ಕಾಡಾನೆ ದಾಳಿ ನಡೆದಿದ ತೀರ್ವತೆಗೆ ಮೃತದೇಹದ ಭಾಗಗಳು ಕಿತ್ತು ಬಂದಿದ್ದು ಭಯಂಕರವಾಗಿ ಕಾಣುತ್ತಿದೆ.
ಘಟನೆ ಹಿನ್ನೆಲೆ ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆನೆಯ ಬಗ್ಗೆ ಮಾಹಿತಿ ನೀಡಿದ್ದರೂ ಯಾರೂ ಸ್ಥಳಕ್ಕೆ ಬಂದಿಲ್ಲ. ಅರಣ್ಯ ಇಲಾಖೆ ನಿರ್ಲಕ್ಷ್ಯದಿಂದಾಗಿ ಈ ಘಟನೆ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಎನ್.ಆರ್.ಪುರ ಪೊಲೀಸರು, ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದು, ಮಾಹಿತಿ ಪಡೆದುಕೊಂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: