ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಡಾನ್ಸ್ ಮಾಡುತ್ತಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ

manjunath
01/09/2025

ಮಂಡ್ಯ: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಡಾನ್ಸ್ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ.

ಕೆ.ಆರ್‌.ಪೇಟೆಯಜೊತ್ತನಪುರ  ಗ್ರಾಮದಲ್ಲಿ ಈ ಘಟನೆ ನಡೆದಿದೆ.  ಮೃತ ವ್ಯಕ್ತಿಯನ್ನು ಮಂಜುನಾಥ್(55) ಎಂದು ಗುರುತಿಸಲಾಗಿದೆ.

ಭಾನುವಾರ ಗಣೇಶ ಮೂರ್ತಿಯ ವಿಸರ್ಜನೆಗೂ ಮುನ್ನ ಗ್ರಾಮದಲ್ಲಿ ಮೆರವಣಿಗೆ ಮಾಡಲಾಗಿತ್ತು. ಈ ವೇಳೆ ಗ್ರಾಮಸ್ಥರು ಬಣ್ಣ ಹಾಕಿಕೊಂಡು ಡಿಜೆ ಸೌಂಡ್‌ಗೆ ಡ್ಯಾನ್ಸ್ ಮಾಡುತ್ತಿದ್ದರು. ಇದ್ದಕ್ಕಿದ್ದಂತೆ ಅವರಿಗೆ ಹೃದಯಾಘಾತವಾಗಿದೆ. ಎಲ್ಲರ ಕಣ್ಣಮುಂದೆಯೇ ಈ ಘಟನೆ ನಡೆದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version