ಉತ್ತರ ಪ್ರದೇಶದಲ್ಲಿ 1 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿಯ ಬಂಧನ

18/02/2024
ಉತ್ತರ ಪ್ರದೇಶದ ಬಹ್ರೈಚ್ ನಲ್ಲಿ ಶನಿವಾರ ಒಂದು ವರ್ಷದ ಬಾಲಕಿಯ ಮೇಲೆ 50 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದಾನೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ವೃಂದಾ ಶುಕ್ಲಾ, ನನ್ಪಾರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಈ ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.
ಎಸ್ಪಿ ಶುಕ್ಲಾ ಅವರ ಪ್ರಕಾರ, ಬಾಲಕಿಯನ್ನು ಮೊದಲು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಕೆಯ ಸ್ಥಿತಿ ಸ್ಥಿರವಾಗಿದ್ದರೂ, ಮಕ್ಕಳ ತಜ್ಞರಿಂದ ಸಮಗ್ರ ಪರೀಕ್ಷೆಗಾಗಿ ಲಕ್ನೋಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.