ರಸ್ತೆಗೆ ಅಡ್ಡ ಬಂದ ಬಾಲಕಿಗೆ ಕಪಾಳಮೋಕ್ಷ ಮಾಡಿದ ವ್ಯಕ್ತಿ: ರಸ್ತೆಯಲ್ಲೇ ಬಾಲಕಿಗೆ ಹಲ್ಲೆ!

ಮಂಡ್ಯ: ಸ್ಕೂಟರ್ ಗೆ ಆಕಸ್ಮಿಕವಾಗಿ ಅಡ್ಡ ಬಂದ ಬಾಲಕಿಗೆ ವ್ಯಕ್ತಿಯೋರ್ವ ಮಾನವೀಯತೆ ಮರೆತು ಕಪಾಳಮೋಕ್ಷ ಮಾಡಿರುವ ಘಟನೆ ಮಂಡ್ಯದ ಸುಭಾಷ್ ನಗರದಲ್ಲಿ ನಡೆದಿದೆ.
ಮಾಯಾ ಎಂಬ ವಿದ್ಯಾರ್ಥಿನಿ ಹಲ್ಲೆಗೊಳಗಾದ ಬಾಲಕಿಯಾಗಿದ್ದಾಳೆ. ಈಕೆ ಸೈಕಲ್ ಮೂಲಕ ಶಾಲೆಗೆ ತೆರಳುತ್ತಿದ್ದಳು. ಈ ವೇಳೆ ರಮೇಶ್ ಎಂಬಾತನ ಸ್ಕೂಟರ್ ಗೆ ಆಕಸ್ಮಿಕವಾಗಿ ಅಡ್ಡ ಬಂದಿದ್ದಾಳೆ ಎನ್ನಲಾಗಿದೆ.
ಇದರಿಂದ ಕೋಪಕೊಂಡ ರಮೇಶ್ ಬಾಲಕಿಗೆ ಕಪಾಳ ಮೋಕ್ಷ ಮಾಡಿದ್ದಾನೆ. ತಪ್ಪಾಯ್ತು ಬಿಟ್ಟು ಬಿಡಿ ಎಂದು ಬಾಲಕಿ ಬೇಡಿಕೊಂಡರೂ ಸ್ಕೂಟಿಯಿಂದ ಇಳಿದು ಬಾಲಕಿಗೆ ಹಲ್ಲೆ ಮಾಡಿದ್ದಾನೆ.
ಆರೋಪಿಯ ಕೃತ್ಯವನ್ನು ವ್ಯಕ್ತಿಯೊಬ್ಬರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ವಿಡಿಯೋ ಆಧರಿಸಿ ಇದೀಗ ಆರೋಪಿಯ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಮಂಡ್ಯ ಪಶ್ಚಿಮ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನೆಯ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth