ಗುದದ್ವಾರದಲ್ಲಿ ಚಿನ್ನ ಅಡಗಿಸಿ ಕಳ್ಳಸಾಗಣೆಗೆ ಯತ್ನ: ಬಾಂಗ್ಲಾದೇಶ ಗಡಿಯಲ್ಲಿ ವ್ಯಕ್ತಿಯ ಬಂಧನ

ಗಡಿ ಭದ್ರತಾ ಪಡೆ (ಬಿಎಸ್ಎಫ್) ಸಿಬ್ಬಂದಿ ಬಾಂಗ್ಲಾದೇಶದ ಗಡಿಯಲ್ಲಿ ಚಿನ್ನ ಕಳ್ಳಸಾಗಣೆ ಪ್ರಯತ್ನವನ್ನು ವಿಫಲಗೊಳಿಸಿದ್ದಾರೆ ಮತ್ತು 51 ಲಕ್ಷ ರೂ.ಗಳ ಮೌಲ್ಯದ ಆರು ಚಿನ್ನದ ಬಿಸ್ಕತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿಯ ಆಧಾರದ ಮೇಲೆ 145 ಬೆಟಾಲಿಯನ್ ನ ಬಿಎಸ್ ಎಫ್ ಸಿಬ್ಬಂದಿ ಪಶ್ಚಿಮ ಬಂಗಾಳದ ಪೆಟ್ರಾಪೋಲ್ ನ ಇಂಟಿಗ್ರೇಟೆಡ್ ಚೆಕ್ ಪೋಸ್ಟ್ (ಐಸಿಪಿ) ನಲ್ಲಿ ಭದ್ರತಾ ತಪಾಸಣೆಯನ್ನು ತೀವ್ರಗೊಳಿಸಿದ್ರು.
ಢಾಕಾದ ತಂಗೈಲ್ ಜಿಲ್ಲೆಯ ಮೊಹಮ್ಮದ್ ತಾರಿಕುಲ್ ಇಸ್ಲಾಂ ಎಂಬ ಬಾಂಗ್ಲಾದೇಶದ ಪ್ರಯಾಣಿಕನ ದೇಹದ ಕೆಳಭಾಗದಲ್ಲಿ ಲೋಹದ ವಸ್ತುವೊಂದು ಇರುವುದು ಪತ್ತೆಯಾಗಿದೆ ಎಂದು ಬಿಎಸ್ಎಫ್ ಹೇಳಿಕೆಯಲ್ಲಿ ತಿಳಿಸಿದೆ.
ವ್ಯಕ್ತಿಯನ್ನು ಸಮಗ್ರ ತಪಾಸಣೆಗಾಗಿ ಶೌಚಾಲಯಕ್ಕೆ ಕರೆದೊಯ್ಯಲಾಯಿತು ಮತ್ತು ಅವನ ಗುದದ್ವಾರದಿಂದ 700 ಗ್ರಾಂ ತೂಕದ ಆರು ಚಿನ್ನದ ಬಿಸ್ಕತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು ವ್ಯಕ್ತಿಯನ್ನು ಬಂಧಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth