ಕುಡಿದ ಮತ್ತಿನಲ್ಲಿ ಆಸಿಡ್ ಸೇವಿಸಿದ ವ್ಯಕ್ತಿಯ ದಾರುಣ ಸಾವು

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಆಸಿಡ್ ಕುಡಿದು ಮೃತಪಟ್ಟಿದ್ದಾರೆ.
ಗ್ರಾಮದ ಸಿದ್ದರಾಜು ( 35) ಮೃತ ದುರ್ದೈವಿ. ಈತ ಕಳೆದ ಮೂರು ದಿನಗಳ ಹಿಂದೆ ಕುಡಿದ ಮತ್ತಿನಲ್ಲಿ ಮನೆಯಲ್ಲಿಟ್ಟಿದ್ದ ಶೌಚಾಲಯ ಸ್ವಚ್ಛಗೊಳಿಸುವ ಆಸಿಡ್ ಸೇವಿಸಿ ಅಸ್ವಸ್ಥಗೊಂಡಿದ್ದರು.
ನಂತರ ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಕೆಆರ್ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw