ಸತ್ತು ಬದುಕಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವು!

ಹಾವೇರಿ: ಸತ್ತು ಬದುಕಿದ್ದ ವ್ಯಕ್ತಿಯೊಬ್ಬರು ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮತ್ತೆ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಗ್ರಾಮದಲ್ಲಿ ನಡೆದಿದೆ.
ಬಿಷ್ಪಪ್ಪ ಅಶೋಕ್ ಗುಡಿಮನಿ(45) ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾರೆ. ಕಳೆದ 15 ದಿನಗಳ ಹಿಂದೆ ಕಾಮಾಲೆ ರೋಗದಿಂದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅಶೋಕ್ ಅವರು ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದರು. ಹೀಗಾಗಿ ಕುಟುಂಬಸ್ಥರು ಊರಿಗೆ ಆ್ಯಂಬುಲೆನ್ಸ್ ಮೂಲಕ ಸಾಗಿಸಿದ್ದರು. ಊರಿಗೆ ಬರುತ್ತಿದ್ದ ವೇಳೆ ಅಶೋಕ್ ಗುಡಿಮನಿ ಅವರ ಇಷ್ಟದ ಡಾಬಾ ಬರುತ್ತಿದ್ದಂತೆಯೇ ಡಾಬಾ ಬಂತು ನೋಡು ಊಟ ಮಾಡೋಣ ಏಳು ಎಂದು ಪತ್ನಿ ಗೋಳಾಡಿದ್ದು, ಈ ವೇಳೆ ಏಕಾಏಕಿ ವ್ಯಕ್ತಿ ಉಸಿರು ಬಿಟ್ಟಿದ್ದರು.
ಕೂಡಲೇ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ನಿರಂತರ ಒಂದು ವಾರ ಕಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಶನಿವಾರ ಮೃತಪಟ್ಟಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: