ಯುವತಿಯರ ಖಾಸಗಿ ಅಂಗಗಳ ಫೋಟೋ, ವಿಡಿಯೋ ಮಾಡುತ್ತಿದ್ದ ಕಾಮುಕ ಪೊಲೀಸ್ ವಶಕ್ಕೆ
![namma mettro](https://www.mahanayaka.in/wp-content/uploads/2025/01/namma-mettro.jpg)
ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ ಯುವತಿಯರ ಅಂಗಾಂಗಗಳ ವಿಡಿಯೋ ಹಾಗೂ ಫೋಟೋ ತೆಗೆಯುತ್ತಿದ್ದ ವ್ಯಕ್ತಿಯನ್ನು ಮೆಟ್ರೋ ನಿಲ್ದಾಣದ ಸೆಕ್ಯೂರಿಟಿ ಗಾರ್ಡ್ ಗಳು ಪೊಲೀಸರಿಗೆ ಒಪ್ಪಿಸಿರುವ ಘಟನೆ ಜಯನಗರದಲ್ಲಿ ನಡೆದಿದೆ.
ಮಹೇಶ್ ಎಂಬಾತ ಪೊಲೀಸ್ ವಶಕ್ಕೆ ಪಡೆದಿರುವ ಆರೋಪಿ ಎಂದು ಗುರುತಿಸಲಾಗಿದೆ. ಈತ ಮೆಟ್ರೋದಲ್ಲಿ ಪ್ರಯಾಣಿಸುತ್ತಿರುವ ಮಹಿಳೆಯರ ಖಾಸಗಿ ಅಂಗಗಳ ಫೋಟೋ ಹಾಗೂ ವಿಡಿಯೋ ಮಾಡಿಕೊಳ್ಳುತ್ತಿದ್ದ ಎನ್ನಲಾಗಿದೆ. ಈತನ ಮೊಬೈಲ್ ನಲ್ಲಿ ಸುಮಾರು 50 ಯುವತಿಯರ ಫೋಟೋ, ವಿಡಿಯೋಗಳು ಪತ್ತೆಯಾಗಿವೆ ಎನ್ನಲಾಗಿದೆ.
ವರದಿಗಳ ಪ್ರಕಾರ ಡಿಸೆಂಬರ್ 25ರಂದು ಬೆಳಗ್ಗೆ ಈ ಘಟನೆ ನಡೆದಿದ್ದು, ಮೆಜೆಸ್ಟಿಕ್ ನಿಂದ ಜೆ.ಪಿ.ನಗರ ಮೆಟ್ರೋ ಸ್ಟೇಷನ್ ಗೆ ಯುವತಿಯೊಬ್ಬರು ಹೋಗುತ್ತಿದ್ದ ವೇಳೆ ಆರೋಪಿಯು ಯುವತಿಯ ವಿಡಿಯೋ ಮಾಡಿಕೊಂಡಿದ್ದ. ಇದನ್ನು ಗಮನಿಸಿದ ಯುವತಿ ಆತನಿಗೆ ಥಳಿಸಿದ್ದಳು. ಈ ವೇಳೆ ನೈಟ್ ಡ್ಯೂಟಿ ಕೆಲಸ ಮುಗಿಸಿ ತೆರಳುತ್ತಿದ್ದ ಮೆಟ್ರೋ ಸೆಕ್ಯೂರಿಟಿಗಳು ಯುವತಿಯ ಸಹಾಯಕ್ಕೆ ಬಂದಿದ್ದು, ಆರೋಪಿಯನ್ನು ಹಿಡಿದು ಜಯನಗರ ಮೆಟ್ರೋ ಸ್ಟೇಷನ್ ನಲ್ಲಿ ರೈಲಿನಿಂದ ಇಳಿಸಿ ಮೊಬೈಲ್ ಪರಿಶೀಲಿಸಿದ ವೇಳೆ ಮೊಬೈಲ್ ನಲ್ಲಿ ವಿಡಿಯೋ, ಫೋಟೋಗಳು ಪತ್ತೆಯಾಗಿವೆ.
ಆರೋಪಿಯನ್ನು ಜಯನಗರ ಪೊಲೀಸ್ ವಶಕ್ಕೆ ನೀಡಲಾಗಿದೆ. ಆರೋಪಿಗೆ ಬಿಎಂಆರ್ ಸಿಎಲ್ 5 ಸಾವಿರ ರೂ. ದಂಡ ವಿಧಿಸಿದೆ ಎಂದು ತಿಳಿದು ಬಂದಿದೆ. ಇನ್ನೂ ಸಕಾಲದಲ್ಲಿ ಯುವತಿಯ ನೆರವಿಗೆ ಬಂದ ಮೆಟ್ರೋ ಸಿಬ್ಬಂದಿಯ ಕರ್ತವ್ಯ ಪ್ರಜ್ಞೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: