10:35 PM Tuesday 14 - October 2025

ಪ್ರಾಧ್ಯಾಪಕಿಯ ಬಗ್ಗೆ ಮಾನಹಾನಿಕರ ಪೋಸ್ಟರ್ ಅಂಟಿಸಿ ಕಿರುಕುಳ: ಇಬ್ಬರು ಪ್ರಾಧ್ಯಾಪಕರ ಬಂಧನ

arrest
20/04/2022

ಮಂಗಳೂರು: ಕಾಲೇಜಿನ ಪ್ರಾಧ್ಯಾಪಕಿಯೊಬ್ಬರ ಕುರಿತು ಮಾನಹಾನಿಕರ ಪತ್ರವನ್ನು ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ ಅಂಟಿಸಿ ಕಿರುಕುಳ ನೀಡುತ್ತಿದ್ದ ಕಾಲೇಜಿನ ಸಂಚಾಲಕ ಹಾಗೂ ಇಬ್ಬರು ಪ್ರಾಧ್ಯಾಪಕರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಬೆಳ್ತಂಗಡಿನ ತಾಲ್ಲೂಕಿನ ಪ್ರಕಾಶ್ ಶೆಣೈ, ಬಂಟ್ವಾಳದ ಪ್ರದೀಪ್ ಪೂಜಾರಿ, ಉಡುಪಿ ಜಿಲ್ಲೆ ಹೆಬ್ರಿ ತಾಲ್ಲೂಕಿನ ತಾರಾನಾಥ ಬಿ.ಎಸ್. ಶೆಟ್ಟಿ ಎಂದು ಗುರುತಿಸಲಾಗಿದೆ.

ಬಂಟ್ವಾಳದ ಕಾಲೇಜೊಂದರ ಆಡಳಿತ ಮಂಡಳಿ ಹಾಗೂ ಶಿಕ್ಷಕರ ನಡುವಿನ ಪ್ರಾಧ್ಯಾಪಕರ ನೇಮಕಾತಿ ಹಾಗೂ ಆಡಳಿತ ವಿಚಾರದ ಗಲಾಟೆಯಲ್ಲಿ ಕಾಲೇಜಿನ ಪ್ರಾಧ್ಯಾಪಕಿ ವಿರುದ್ಧ ಮಾನಹಾನಿಕರವಾದ ಪತ್ರ ಹಂಚಲಾಗಿತ್ತು ಎನ್ನಲಾಗಿದೆ.

ಇನ್ನು ಮೊದಲಿಗೆ ಪ್ರಾಧ್ಯಾಪಕಿಯ ವಿರುದ್ಧ ಮಾನಹಾನಿಕರವಾದ ಬರಹವನ್ನು ಪೋಸ್ಟ್ ಕಾರ್ಡ್, ಇನ್ ಲ್ಯಾಂಡ್ ಲೆಟರ್ ಮೂಲಕ ಪ್ರಾಧ್ಯಾಪಕಿಯ ಭಾವಚಿತ್ರದೊಂದಿಗೆ ಸಹೋದ್ಯೋಗಿ ಪ್ರಾಧ್ಯಾಪಕರಿಗೆ, ಕಾಲೇಜಿನ ಮುಖ್ಯಸ್ಥರಿಗೆ, ಶಿಕ್ಷಣ ಇಲಾಖೆಯ ಉನ್ನತ ದರ್ಜೆಯ ಅಧಿಕಾರಿಗಳಿಗೆ ಕಳುಹಿಸಿಕೊಡುತ್ತಿದ್ದು, ಇದಾದ ನಂತರ ಪ್ರಾಧ್ಯಾಪಕಿಯ ಮೊಬೈಲ್ ನಂಬರ್ ಹಾಗೂ ಇ-ಮೇಲ್ ಐಡಿಯನ್ನು ನಮೂದಿಸಿ ಅಶ್ಲೀಲವಾಗಿ ಬರೆದು ಪೋಸ್ಟರ್ ಗಳನ್ನು ತಯಾರಿಸಿ ಸುಳ್ಯ, ಸುಬ್ರಹ್ಮಣ್ಯ, ಸಂಪಾಜೆ, ಮಡಿಕೇರಿ, ಮೈಸೂರು, ಚಿಕ್ಕಮಗಳೂರು, ಮೂಡಿಗೆರೆ, ಬಾಳೆಹೊನ್ನೂರು, ಎನ್ ಆರ್ ಪುರ, ಶಿವಮೊಗ್ಗ ಮುಂತಾದ ಬಸ್ ನಿಲ್ದಾಣಗಳ ಸಾರ್ವಜನಿಕ ಶೌಚಾಲಯಗಳಲ್ಲಿ ಅಂಟಿಸಿದ್ದು, ಇದನ್ನು ನೋಡಿದ ಸಾರ್ವಜನಿಕರು ಪ್ರಾಧ್ಯಾಪಕಿಗೆ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಪ್ರಾಧ್ಯಾಪಕಿ ನೀಡಿದ ದೂರಿನ ಅನ್ವಯ ಮೂವರನ್ನು ಬಂಧಿಸಿದ್ದಾರೆ.

ಆರೋಪಿಗಳ ಪೈಕಿ ಪ್ರದೀಪ್ ಪೂಜಾರಿ ಎಂಬಾತನ ವಿರುದ್ಧ ಈ ಹಿಂದೆ 2019ರಲ್ಲಿ ಕಾಲೇಜು ಪ್ರಾಧ್ಯಾಪಕಿಯೊಬ್ಬರ ಮೇಲೆ ಮಾನಹಾನಿಗೆ ಯತ್ನಿಸಿದ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರುಗಳ ಪತ್ತೆ ಕಾರ್ಯ ಮುಂದುವರಿದಿದೆ. ಆರೋಪಿಗಳಿಂದ 3 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನೈತಿಕ ಶಿಕ್ಷಣ ಜಾರಿ: ಶಾಲಾ ಪಠ್ಯ ಕ್ರಮದಲ್ಲಿ ಕುರಾನ್ ಸೇರ್ಪಡೆ: ಬಿ.ಸಿ.ನಾಗೇಶ್

ಸರ್ಕಾರದ ಮೇಲೆ ಕಮಿಷನ್ ಆರೋಪ ಸತ್ಯಕ್ಕೆ ದೂರವಾದದ್ದು | ನಿರಂಜನಾನಂದಪುರಿ ಸ್ವಾಮೀಜಿ

ಕೋಟಿ ಸಂಭಾವನೆ ಕೊಟ್ಟರೂ ತಂಬಾಕು ಜಾಹೀರಾತಿನಲ್ಲಿ ನಟಿಸಲ್ಲ ಎಂದ ಅಲ್ಲು ಅರ್ಜುನ್

ಬಸ್ಸಿನ ಕಿಟಕಿ ತೆರೆಯುವ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಚಾಲಕನ ಬಂಧನ

ಇತ್ತೀಚಿನ ಸುದ್ದಿ

Exit mobile version