ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆಸ್ಪತ್ರೆಯಿಂದ ಬಿಡುಗಡೆ - Mahanayaka
11:44 PM Wednesday 10 - December 2025

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆಸ್ಪತ್ರೆಯಿಂದ ಬಿಡುಗಡೆ

manamohan singh
29/04/2021

ನವದೆಹಲಿ: ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಯ ಟ್ರಾಮಾ ಸೆಂಟರ್ ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ಅವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಏಪ್ರಿಲ್ 19ರಂದು ಆಸ್ಪತ್ರೆಗೆ ದಾಖಲಾಗಿದ್ದ ಮನಮೋಹನ ಸಿಂಗ್, ಚಿಕಿತ್ಸೆ ಪಡೆಯುತ್ತಿದ್ದರು.  ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದ ಮನಮೋಹನ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಕೊರೊನಾ ನಿಯಂತ್ರಣಕ್ಕೆ ಸಲಹೆಗಳನ್ನು ನೀಡಿದ್ದರು. ಇದರ ಬೆನ್ನಲ್ಲೇ ಅವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು.

2009ರಲ್ಲಿ ಎರಡನೇ ಬಾರಿಗೆ ಹೃದಯದ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮನಮೋಹನ್ ಸಿಂಗ್ ಅವರು ಕಳೆದ ವರ್ಷ ಮೇ ತಿಂಗಳಿನಲ್ಲಿ ಎದೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಈ ವರ್ಷ ಏಪ್ರಿಲ್ ನಲ್ಲಿ ಅವರು ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.

ದೇಶದ ಜನಪ್ರಿಯ ಪ್ರಧಾನಿಯಾಗಿರುವ ಮನಮೋಹನ್ ಸಿಂಗ್ ಅವರ ಆಡಳಿತದ ಬಗ್ಗೆ ಇಂದಿಗೂ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅವರಿಗೆ ಅನಾರೋಗ್ಯ ಕಾಡಿದ್ದರಿಂದ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಆತಂಕಕ್ಕೀಡಾಗಿದ್ದರು.

ಇತ್ತೀಚಿನ ಸುದ್ದಿ