1:54 AM Wednesday 10 - December 2025

ಮನೆ ಜಪ್ತಿ ಮಾಡಿದ ಬ್ಯಾಂಕ್ ಸಿಬ್ಬಂದಿ: ಅದೇ ಮನೆಯಲ್ಲಿ ನೇಣಿಗೆ ಶರಣಾದ ಮನೆಯ ಮಾಲಕಿ

18/02/2021

ಪುತ್ತೂರು: ಬ್ಯಾಂಕ್ ಸಿಬ್ಬಂದಿ ಮನೆಯನ್ನು ಜಪ್ತಿ ಮಾಡಿದ್ದರಿಂದ ನೊಂದು ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ  ಹಾರಾಡಿ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.

ರಾಷ್ಟ್ರೀಕೃತ ಬ್ಯಾಂಕೊಂದರ ಸಿಬ್ಬಂದಿ ಮನೆ ಜಪ್ತಿ ಮಾಡಿ ಹೋಗಿದ್ದರು. ಬ್ಯಾಂಕ್ ಸಿಬ್ಬಂದಿ ಹೋದ ಬೆನ್ನಲ್ಲೇ ಮನೆಯ ಮಾಲಕಿ  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಸಾಲ ಮರುಪಾವತಿ ಆಗಿಲ್ಲ ಎಂದು ಬ್ಯಾಂಕ್ ಸಿಬ್ಬಂದಿ ಮನೆ ಜಪ್ತಿ ಮಾಡಿದ್ದರು ಎಂದು ತಿಳಿದು ಬಂದಿದೆ. ರಘುವೀರ್ ಪ್ರಭು ಎಂಬವರ ಪತ್ನಿ ಪ್ರಾರ್ಥನಾ ಬ್ಯಾಂಕ್ ಸಿಬ್ಬಂದಿಯ ಕ್ರಮದಿಂದ ನೊಂದು ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬಂಧ ಹೆಚ್ಚಿನ ಮಾಹಿತಿಗಳಿಗಾಗಿ ನಿರೀಕ್ಷಿಸಲಾಗುತ್ತಿದೆ.

ಇತ್ತೀಚಿನ ಸುದ್ದಿ

Exit mobile version