ಮಂಗಳೂರು: ಜ್ಯುವೆಲ್ಲರಿಗೆ ನುಗ್ಗಿ ವ್ಯಕ್ತಿಯನ್ನು ಇರಿದು ಬರ್ಬರ ಹತ್ಯೆ! - Mahanayaka

ಮಂಗಳೂರು: ಜ್ಯುವೆಲ್ಲರಿಗೆ ನುಗ್ಗಿ ವ್ಯಕ್ತಿಯನ್ನು ಇರಿದು ಬರ್ಬರ ಹತ್ಯೆ!

mangalore
03/02/2023

ವ್ಯಕ್ತಿಯನ್ನು ಚೂರಿಯಿಂದ ಇರಿದು ಕೊಲೆಗೈದ ಘಟನೆ ಮಂಗಳೂರು ನಗರದ ಹಂಪನಕಟ್ಟೆಯಲ್ಲಿ ಸಂಜೆ ನಡೆದಿದೆ.

ಹಂಪನಕಟ್ಟೆಯ ಮಂಗಳೂರು ಜ್ಯುವೆಲ್ಲರ್ಸ್‌ನಲ್ಲಿ ಕೆಲಸಕ್ಕಿದ್ದ ಅತ್ತಾವರ ಮೂಲದ ರಾಘವ ಆಚಾರಿ ಎಂಬುವವರನ್ನು ಕೊಲೆ ಮಾಡಲಾಗಿದೆ.

ವ್ಯಕ್ತಿಯೊಬ್ಬ ಅಂಗಡಿಗೆ ಪ್ರವೇಶಿಸಿ ರಾಘವ ಆಚಾರಿಗೆ ಚೂರಿಯಿಂದ ಇರಿದಿದ್ದು, ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಕೊಲೆ ಕೃತ್ಯವು ಸಿಸಿ ಕ್ಯಾಮರಾದಲ್ಲಿ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ