ಮಂಗಳೂರು: ಗಾಂಜಾ ಸೇವನೆ ಮತ್ತು ಮಾರಾಟ ಪ್ರಕರಣ: 4 ವೈದ್ಯರು 19 ವಿದ್ಯಾರ್ಥಿಗಳಿಗೆ ಜಾಮೀನು

ಇತ್ತೀಚೆಗೆ ಮಂಗಳೂರಲ್ಲಿ ಗಾಂಜಾ ಸೇವನೆ ಮತ್ತು ಮಾರಾಟ ಪ್ರಕರಣದಡಿಯಲ್ಲಿ ಬಂಧಿತರಾಗಿದ್ದ 4 ಮಂದಿ ವೈದ್ಯರು ಮತ್ತು 19 ವೈದ್ಯಕೀಯ ವಿದ್ಯಾರ್ಥಿಗಳಿಗೆ ಮಂಗಳೂರು ಕೋರ್ಟ್ ಜಾಮೀನು ನೀಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿ ವೈದ್ಯರು ಮತ್ತು ವಿದ್ಯಾರ್ಥಿಗಳ ಸಹಿತ ಒಟ್ಟು 24 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಈ ಪೈಕಿ ಬಿಡಿಎಸ್ ವಿದ್ಯಾರ್ಥಿಯೋರ್ವನನ್ನು ಹೊರತುಪಡಿಸಿ ಉಳಿದ 23 ಮಂದಿಗೂ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ನೀಡಿದೆ.
ಈ ಹಿಂದೆ 13 ಮಂದಿಗೆ ಇತ್ತೀಚೆಗೆ ಜಾಮೀನು ಮಂಜೂರಾಗಿತ್ತು. ಇದೀಗ ಮತ್ತೆ 10 ಮಂದಿಗೆ ಜಾಮೀನು ಮಂಜೂರಾಗಿದೆ. ನೀಲ್ ಕಿಶೋರಿಲಾಲ್ ರಾಮ್ ಜಿ ಶಾ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾನೆ. ತನಿಖೆ ನಡೆಯುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw