ಮಂಗಳೂರು ಏರ್ ಪೋರ್ಟ್’ನಲ್ಲಿ 2.01 ಕೋ.ರೂ. ಮೌಲ್ಯದ ಅಕ್ರಮ ಚಿನ್ನಾಭರಣ ವಶ
ಮಂಗಳೂರು: ಏರ್ ಪೋರ್ಟ್ ನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ನಾಲ್ಕು ಮಂದಿಯನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತ ನಾಲ್ಕು ಮಂದಿ ಪ್ರಯಾಣಿಕರಿಂದ 24 ಕ್ಯಾರೆಟ್ ಶುದ್ಧತೆಯ 3.895 ಕೆ.ಜಿ.ಯ ಒಟ್ಟು 2.01 ಕೋ.ರೂ. ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರು ನ.10ರಂದು ದುಬೈನಿಂದ ಬಂದ ವಿಮಾನದಲ್ಲಿ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನಕ್ಕೆ ಬಂದಿಳಿದ ನಾಲ್ಕು ಮಂದಿ ಪ್ರಯಾಣಿಕರು ಟ್ರಾಲಿ ಬ್ಯಾಗ್ ಗಳಲ್ಲಿ ರೋಡಿಯಂ ಲೇಪಿತ ಚಿನ್ನದ ಪಟ್ಟಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ವಶಕ್ಕೆ ಪಡೆದು ಕೊಂಡಿದ್ದಾರೆ.
ನಾಲ್ವರನ್ನು ವಶಕ್ಕೆ ಪಡೆದುಕೊಂಡ ಕಸ್ಟಮ್ಸ್ ಅಧಿಕಾರಿಗಳು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka