ಮಂಗಳೂರಿನಲ್ಲಿ ಬಾಂಬ್ ಸ್ಪೋಟ: ಗೃಹ ಇಲಾಖೆಯ ವೈಫಲ್ಯ: ಸಿದ್ದರಾಮಯ್ಯ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋವೊಂದರಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಸಂಬಂಧಿಸಿದಂತೆ ಡಿಜಿಪಿ ಅವರು ಇದೊಂದು ಉಗ್ರ ಕೃತ್ಯ ಎಂದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ರಾಜ್ಯ ಪೊಲೀಸ್ ಮಹಾನಿರ್ದೇಶಕರೇ ಭಯೋತ್ಪಾದಕ ಕೃತ್ಯ ಎಂದು ದೃಢೀಕರಿಸಿರುವ ಮಂಗಳೂರು ನಗರದ ಬಾಂಬು ಸ್ಪೋಟದ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕಳವಳಕಾರಿಯಾದ ಈ ಘಟನೆಯ ಬಗ್ಗೆ ಪೊಲೀಸರು ತ್ವರಿತಗತಿಯಲ್ಲಿ ತನಿಖೆ ನಡೆಸಿ ದುಷ್ಕರ್ಮಿಗಳನ್ನು ಬಂಧಿಸಿ ಶಿಕ್ಷೆಗೊಳಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಮಂಗಳೂರು ಬಾಂಬ್ ಸ್ಪೋಟ ಮತ್ತೊಮ್ಮೆ ರಾಜ್ಯದ ಗುಪ್ತಚರ ವಿಭಾಗ ಮತ್ತು ಗೃಹ ಇಲಾಖೆಯ ವೈಫಲ್ಯವನ್ನು ಎತ್ತಿ ತೋರಿಸಿದೆ. ಈ ಘಟನೆಯ ಬಗ್ಗೆ ಊಹಾಪೋಹಗಳ ಸುದ್ದಿಗಳನ್ನು ನಂಬಿ ಉದ್ರಿಕ್ತರಾಗದೆ, ಸಂಯಮ ಮತ್ತು ಎಚ್ಚರದಿಂದ ಇರಬೇಕೆಂದು ರಾಜ್ಯದ ಜನರಲ್ಲಿ ಕೇಳಿಕೊಳ್ಳುತ್ತಿದ್ದೇನೆಂದು ಅವರು ಮನವಿ ಮಾಡಿಕೊಂಡರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka