1:19 AM Saturday 24 - January 2026

ಬಸ್ ನಲ್ಲಿ ಪ್ಯಾಂಟ್’ನ ಜಿಪ್ ತೆಗೆದು ವೈದ್ಯೆಯ ಮುಂದೆ ಅಸಭ್ಯ ವರ್ತನೆ: ಬಸ್ ಕ್ಲೀನರ್ ಅರೆಸ್ಟ್

imran
10/11/2022

ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದಡಿಯಲ್ಲಿ ಬಸ್ ಕ್ಲೀನರ್ ನನ್ನು ಉಳ್ಳಾಲ ಠಾಣಾ ಪೊಲೀಸರು ಗುರುವಾರ ಬೆಳಗ್ಗೆ ಬಂಧಿಸಿದ್ದಾರೆ.

ಬಸ್ ಕ್ಲೀನರ್ ಮುಹಮ್ಮದ್ ಇಮ್ರಾನ್(26) ಬಂಧಿತ ಆರೋಪಿ. ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕರ್ತವ್ಯದಲ್ಲಿರುವ ವೈದ್ಯೆಯೊಬ್ಬರು ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದ‌ರು. ಬಸ್ ಗುರುವಾರ ಮುಂಜಾನೆ ಉಳ್ಳಾಲ ಠಾಣಾ ವ್ಯಾಪ್ತಿಗೆ ತಲುಪಿದಾಗ ಬಸ್ ಕ್ಲೀನರ್ ಮುಹಮ್ಮದ್ ಇಮ್ರಾನ್ ತಾನು ಧರಿಸಿದ್ದ ಪ್ಯಾಂಟ್ ನ ಜಿಪ್ ತೆಗೆದು ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ವೈದ್ಯೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿರುವ ಉಳ್ಳಾಲ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

YouTube video player

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version