ಮಂಗಳೂರು: ಮಾದಕ ವಸ್ತು ಹೊಂದಿದ್ದ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು

ಮಂಗಳೂರಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ಮಾಡಿ ಮಾದಕ ವಸ್ತು ಹೊಂದಿದ ಆರೋಪಿಯನ್ನು ಬಂಧಿಸಿದ್ದಾರೆ.
ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಕೆ.ಸಿ.ರೋಡ್ ಪರಿಸರದಲ್ಲಿ ಮಾದಕ ವಸ್ತುವಾದ ಎಂಡಿಎಂಎ ಅನ್ನು ಬೆಂಗಳೂರಿನಿಂದ ಖರೀದಿಸಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು MDMA ಎಂಬ ನಿಷೇಧಿತ ಮಾದಕ ವಸ್ತುವನ್ನು ಹೊಂದಿದ ಉಪ್ಪಳದ ಮೊಹಮ್ಮದ್ ರಫೀಕ್ ಬಿ ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನ ವಶದಿಂದ ಒಟ್ಟು 50 ಗ್ರಾಂ ತೂಕದ 2,50,000 ಮೌಲ್ಯದ ಎಂಡಿಎಂಎ ಮಾದಕ ವಸ್ತು, ನಗದು 8,000 ಮೊಬೈಲ್-1, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ.
ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 2,68,500 ರೂಪಾಯಿ ಆಗಬಹುದು. ಆರೋಪಿಯ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ. ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿಪಿಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್.ಎಂ., ಪಿಎಸ್ ಐಯವರಾದ ರಾಜೇಂದ್ರ ಬಿ., ಸುದೀಪ್ ಎಂ.ವಿ., ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.
‘ಡ್ರಗ್ಸ್ ಫ್ರಿ ಮಂಗಳೂರು’ ಮಾಡುವ ನಿಟ್ಟಿನಲ್ಲಿ ಮಂಗಳೂರು ನಗರದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುವ ವ್ಯಕ್ತಿಗಳನ್ನು ಪತ್ತೆ ಹಚ್ಚುವ ಸಲುವಾಗಿ ಮಾದಕ ವಸ್ತು ಮಾರಾಟ ಮಾಡುವವರ ಮಾಹಿತಿಯನ್ನು ಪೊಲೀಸ್ ಇಲಾಖೆಗೆ ಒದಗಿಸುವಂತೆ ಸಾರ್ವಜನಿಕರಲ್ಲಿ ಕೋರಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw