10:33 AM Tuesday 28 - October 2025

ಮಂಗಳೂರು ಕಮಿಷನರ್, ಎಸ್ ಪಿ ವರ್ಗಾವಣೆ

mangalore police
30/05/2025

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಯತೀಶ್ ಎನ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಅವರನ್ನು ಸಿಐಡಿಯ ಆರ್ಥಿಕ ಅಪರಾಧ ವಿಭಾಗದ ಡಿಐಜಿ ಹುದ್ದೆಗೆ ವರ್ಗಾಯಿಸಲಾಗಿದೆ. ಮಂಗಳೂರು ಕಮಿಷನರ್ ಆಗಿ ಗುಪ್ತಚರ ವಿಭಾಗದ ಡಿಐಜಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ನೇಮಿಸಲಾಗಿದೆ.

ದಕ್ಷಿಣ ಕ‌ನ್ನಡ ಜಿಲ್ಲಾ ಎಸ್ ಪಿ ಯತೀಶ್ ಎನ್ ಅವರನ್ನು ವರ್ಗಾವಣೆ ಮಾಡಿ ಅವರ ಹುದ್ದೆಗೆ ಉಡುಪಿ ಜಿಲ್ಲಾ ಎಸ್ ಪಿ ಅರುಣ್ ಕೆ ಅವರನ್ನು ನೇಮಿಸಲಾಗಿದೆ. ಗುಪ್ತಚರ ವಿಭಾಗದ ಎಸ್ ಪಿ ಹರಿರಾಮ್ ಶಂಕರ್ ಅವರನ್ನು ಉಡುಪಿ ಜಿಲ್ಲಾ ಎಸ್ ಪಿ ಯಾಗಿ ನೇಮಕ ಮಾಡಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version