10:52 AM Saturday 18 - October 2025

ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡಿ | ಕಾಂಗ್ರೆಸ್ ನಿಂದ ಪಂಜಿನ ಮೆರವಣಿಗೆ

19/11/2020

ಮಂಗಳೂರು: ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡುವಂತೆ ಒತ್ತಾಯಿಸಿ ಯುವ ಕಾಂಗ್ರೆಸ್ ಹಾಗೂ ಮುಲ್ಕಿ, ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಸಮಿತಿಗಳು ನಗರದಲ್ಲಿ ಪಂಜಿನ ಮೆರವಣಿಗೆ ನಡೆಸಿತು.

ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ರಮಾನಾಥ ರೈ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಅದಾನಿಯ ಕೃಪಾಕಟಾಕ್ಷದಿಂದ ಅಧಿಕಾರಕ್ಕೇರಿದ್ದಾರೆ. ಅವರನ್ನು‌‌ ಓಲೈಸಲು ಇದೀಗ ವಿಮಾನ ನಿಲ್ದಾಣವನ್ನು ಖಾಸಗಿಕರಣಗೊಳಿಸಲಾಗಿದೆ. ಮಂಗಳೂರು ವಿಮಾನ‌ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರು ಇಡುವವರೆಗೆ ನಮ್ಮ ಪ್ರತಿಭಟನೆ ನಿರಂತರವಾಗಿ ಮುಂದುವರೆಯಲಿದೆ ಎಂದು ಅವರು ಹೇಳಿದರು.

ಕದ್ರಿಯಿಂದ ಕಾಲ್ನಡಿಗೆ ಮೂಲಕ ಬಜ್ಪೆ ಸಮೀಪದಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ತನಕ ಪಂಜಿನ ಮೆರವಣಿಗೆ ಸಾಗಿತು. ಮೆರವಣಿಗೆಯಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ, ಮಾಜಿ ಶಾಸಕರಾದ ಅಭಯಚಂದ್ರ ಜೈನ್, ಶಕುಂತಳಾ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಎ.ಸಿ. ವಿನಯರಾಜ್ ಮತ್ತಿತರರಿದ್ದರು.  ಭಾರೀ ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

Exit mobile version