ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ವಿಚಾರ: ಉಡುಪಿಯಲ್ಲಿ ಸಂಸದ ತೇಜಸ್ವಿ ಸೂರ್ಯ ಪ್ರತಿಕ್ರಿಯೆ - Mahanayaka

ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ವಿಚಾರ: ಉಡುಪಿಯಲ್ಲಿ ಸಂಸದ ತೇಜಸ್ವಿ ಸೂರ್ಯ ಪ್ರತಿಕ್ರಿಯೆ

tejaswi surya
22/11/2022

ಉಡುಪಿ: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಸಂಸದ ತೇಜಸ್ವಿ ಸೂರ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಕರ್ನಾಟಕದಲ್ಲಿ ಭಯೋತ್ಪಾದನಾ ಚಟುವಟಿಕೆ ಮಾಡಬೇಕು ಎಂಬುದು ಕೆಲವರ ಉದ್ದೇಶ. ಆರ್ಥಿಕ ಶಕ್ತಿಕೇಂದ್ರದಲ್ಲಿ ಕೋಮುಗಲಭೆ ಸೃಷ್ಟಿಸುವ ಷಡ್ಯಂತ್ರ ನಡೆದಿದೆ ಎಂದು ಅವರು ಆರೋಪಿಸಿದರು.

ಕರ್ನಾಟಕದಲ್ಲಿ ಸರಣಿ ಕೊಲೆಗಳು ನಡೆದಿದ್ದವು. ರಾಜ್ಯವನ್ನು ಶಾಂತಿ ಸುವ್ಯವಸ್ಥೆ ಕೆಡಿಸುವ ಕೆಲಸ ನಡೆಯುತ್ತಿದೆ.  ಪಿಎಫ್ ಐ ಬ್ಯಾನ್ ಮಾಡಿದಂತೆ ಭಯೋತ್ಪಾಧಕರ ಬೇರು ಸಮೇತ ಕಿತ್ತು ಹಾಕುತ್ತೇವೆ ಎಂದರು.

ಈವರೆಗೆ ರಾಜ್ಯದಲ್ಲಿ ದೊಡ್ಡಮಟ್ಟದ ಚಟುವಟಿಕೆ ನಡೆದಿಲ್ಲ. ಈ ಒಂದು ಘಟನೆ ರಾಜ್ಯವನ್ನು ಎಚ್ಚರಿಸಲಿದೆ. ಕರಾವಳಿಯಲ್ಲೇ ಒಂದು ಎನ್ ಐ ಎ ಆಫೀಸ್ ಬೇಕಾಗಿದೆ. ಕರ್ನಾಟಕ ಕರಾವಳಿ ವಿಚ್ಛಿದ್ರ ಶಕ್ತಿಗಳ ಕೇಂದ್ರವಾಗುತ್ತಿದೆ. ಕರಾವಳಿಯಲ್ಲಿ ಎನ್ ಐ ಎ ಕ್ಯಾಂಪ್ ಆಫೀಸ್ ಸ್ಥಾಪನೆ ಮಾಡಬೇಕು. ಈ ಹಿಂದೆಯೇ ಗೃಹ ಸಚಿವ ಅಮಿತ್ ಶಾ ಜೊತೆ ಮಾತನಾಡಿದ್ದೇನೆ.  ಈ ಬಗ್ಗೆ ಮತ್ತೆ ಕೇಂದ್ರ ಸರಕಾರ ಜೊತೆ ಮಾತನಾಡುತ್ತೇನೆ ಎಂದರು.

ಪೊಲೀಸ್– ಇಂಟೆಲಿಜನ್ಸ್ ಎನ್ ಐ ಎ ಜೊತೆಯಾಗಿ ಕೆಲಸ ಮಾಡಿದರೆ ಇಂತಹ ಘಟನೆ ತಡೆಗಟ್ಟಬಹುದು. ರಾಜ್ಯದ ಜನರ ಜೀವ ಮತ್ತು ವಸ್ತುಗಳ ಸಂರಕ್ಷಣೆ ನಮ್ಮ ಕರ್ತವ್ಯ ನಾವು ಓಟ್ ಬ್ಯಾಂಕ್ ಗೆ ಮುಲಾಜು ಬಿದ್ದು ರಾಜಕೀಯ ಮಾಡಲ್ಲ. ರಾಷ್ಟ್ರೀಯ ರಾಜ್ಯದ ಸುರಕ್ಷತೆಗೆ ನಮ್ಮ ಆದ್ಯತೆ . ದೇಶದ ಸುರಕ್ಷತೆ ವಿಚಾರದಲ್ಲಿ ಕಾಂಪ್ರಮೈಸ್ ಮಾಡಲ್ಲ. ಬ್ಲ್ಯಾಸ್ಟ್ ಹಿಂದಿರುವವರನ್ನು ಕಾನೂನಾತ್ಮಕವಾಗಿ ಸಂಹಾರ ಮಾಡುತ್ತೇವೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ