ಉದ್ಯಮಿಯ ಮೇಲೆ ತಲವಾರಿನಿಂದ ದಾಳಿ | ಸಿಸಿ ಕ್ಯಾಮರದಲ್ಲಿ ದೃಶ್ಯ ಸೆರೆ - Mahanayaka

ಉದ್ಯಮಿಯ ಮೇಲೆ ತಲವಾರಿನಿಂದ ದಾಳಿ | ಸಿಸಿ ಕ್ಯಾಮರದಲ್ಲಿ ದೃಶ್ಯ ಸೆರೆ

16/11/2020

ಮಂಗಳೂರು:  ಉದ್ಯಮಿಯೊಬ್ಬರ ಮೇಲೆ ತಳವಾರಿನಿಂದ ದಾಳಿ ಮಾಡಿರುವ ಆಘಾತಕಾರಿ ಘಟನೆ ಮಂಗಳೂರಿನ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂದಾವರದಲ್ಲಿ ನಡೆದಿದ್ದು,  ಇಬ್ಬರು ಯುವಕರು ಈ ಕೃತ್ಯ ಎಸಗಿದ್ದಾರೆ.

ಭಾನುವಾರ ರಾತ್ರಿ ಸುಮಾರು 10:30ರ ವೇಳೆಗೆ ಉದ್ಯಮಿ ಅಬ್ದುಲ್ ಅಜೀನ್(58) ಮಸೀದಿಯಿಂದ ನಮಾಝ್ ಮುಗಿಸಿಕೊಂಡು ಮನೆಗೆ ಹಿಂದಿರುಗಲು ತನ್ನ ಕಾರಿನತ್ತ ಹೋಗುತ್ತಿದ್ದಂತೆಯೇ ಇಬ್ಬರು ದುಷ್ಕರ್ಮಿಗಳು ತಲ್ವಾರ್ ನಿಂದ ದಾಳಿ ನಡೆಸಿದ್ದಾರೆ.

ದುಷ್ಕರ್ಮಿಗಳ ದಾಳಿಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ.  ಹಲ್ಲೆಯ ಪರಿಣಾಮ ಅಬ್ದುಲ್ ಅಜೀಜ್ ಅವರ ಕಾಲು, ತಲೆ, ಕೈಗೆ ಗಾಯವಾಗಿದೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ.

ಗಾಯಾಳು ಅಜೀಜ್ ಅವರನ್ನು  ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಸಂಬಂಧ ಬಜ್ಪೆ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ