ಮಂಗಳೂರು: ಗುಡ್ಡ ಕುಸಿತ ಪ್ರಕರಣ: ಮೃತರ ಸಂಖ್ಯೆ 2ಕ್ಕೆ ಏರಿಕೆ

ಕೊಣಾಜೆ: ಮಂಜನಾಡಿಯ ಮೊಂಟೆಪದವು ಹಿತ್ತಿಲುಕೋಡಿ ಕೊಪ್ಪಲ ಬಳಿಯಲ್ಲಿ ಮನೆ ಮೇಲೆ ಗುಡ್ಡ ಕುಸಿದ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆಯಲ್ಲಿ 2ಕ್ಕೆ ಏರಿಕೆಯಾಗಿದೆ.
ಕಾಂತಪ್ಪ ಪೂಜಾರಿ ಅವರ ಸೊಸೆ ಅಶ್ವಿನಿ ಮತ್ತು ಇಬ್ಬರು ಮೊಮ್ಮಕ್ಕಳ ಪೈಕಿ ಒಂದು ಮಗು ಸಾವನ್ನಪ್ಪಿದೆ. ಅಲ್ಲದೇ ಇನ್ನೊಂದು ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. ಮಗುವಿನ ತಾಯಿ ಅಶ್ವಿನಿ ಉಸಿರಾಡುತ್ತಿದ್ದಾರೆ. ಕೈಗಳನ್ನು ಅಲ್ಲಾಡಿಸುತ್ತಿದ್ದಾರೆ ಎಂದು ಕೆಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯ ಡಾ.ವಿಕ್ರಂ ಶೆಟ್ಟಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಮೃತಪಟ್ಟಿರುವ ಮಗುವನ್ನು ಈಗಾಗಲೇ ಅವಶೇಷಗಳಡಿಯಿಂದ ರಕ್ಷಣಾ ತಂಡ ಹೊರ ತೆಗೆದಿದೆ. ತಾಯಿ ಮತ್ತು ಮಗುವಿನ ರಕ್ಷಣೆಗೆ ಕಾರ್ಯಾಚರಣೆ ಮುಂದುವರಿಸಲಾಗಿದೆ.
ಶುಕ್ರವಾರ ಮುಂಜಾನೆ 4 ಗಂಟೆಗೆ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಕಾಂತಪ್ಪ ಪೂಜಾರಿ ಅವರ ಪತ್ನಿ ಪ್ರೇಮಾ(58) ಸಾವನ್ನಪ್ಪಿದ್ದಾರೆ. ಇದೀಗ ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಸಾವನ್ನಪ್ಪಿದೆ. ಕಾಂತಪ್ಪ ಪೂಜಾರಿ ಸೊಸೆ ಹಾಗೂ ಅವರ ಮತ್ತೊಂದು ಮಗು ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ. ವೈದ್ಯರ ತಂಡ ಕೂಡ ಸ್ಥಳದಲ್ಲಿದ್ದು, ಇವರ ರಕ್ಷಣೆಗೆ ಹರಸಾಹಸ ಪಡುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD