ಮಂಗಳೂರು: ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಭೂಕುಸಿತ: ಅವಶೇಷಗಳಡಿ ಸಿಲುಕಿದ ಕಾರ್ಮಿಕರು

balmatta
03/07/2024

ದಕ್ಷಿಣ ಕನ್ನಡ: ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಭೂಕುಸಿತವಾಗಿದ್ದು, ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆ ಮಂಗಳೂರು ನಗರದ ಬಲ್ಮಠ ಬಳಿ ನಡೆದಿದೆ.

ಘಟನೆ ಹಿನ್ನೆಲೆ ಎಸ್.ಡಿ.ಆರ್.ಎಫ್, ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅವಶೇಷದಡಿ ಸಿಲುಕಿದ್ದ ಓರ್ವ ಕೂಲಿ ಕಾರ್ಮಿಕನನ್ನು ರಕ್ಷಣೆ ಮಾಡಲಾಗಿದೆ. ಮಣ್ಣಿನಡಿ ಸಿಲುಕಿರುವ ಕಾರ್ಮಿಕರ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರಿದಿದೆ.

ಕಳೆದ ಮೂರು ದಿನದ ಹಿಂದೆ ಸುರಿದ ಮಳೆಯಿಂದ ಮಣ್ಣಿನ ದಿಬ್ಬ ಸಡಿಲಗೊಂಡಿದ್ದು, ರಿಟೇನಿಂಗ್ ವಾಲ್ ಹಾಗೂ ಹಾಕಲಾದ ಶೀಟ್ಗಳ ಮೇಲೆ ಮಣ್ಣು ಬಿದ್ದಿದೆ. ಇದರಿಂದ ರಿಟೇನಿಂಗ್ ವಾಲ್ ಹಾಗೂ ಶೀಟ್ ಮಧ್ಯೆ ಕಾರ್ಮಿಕರು ಸಿಲುಕಿದ್ದಾರೆ.

ಮಣ್ಣಿನಡಿ ಸಿಲುಕಿದವರು ಬಿಹಾರ ಮೂಲದವರಾದ ಚಂದನ್ ಮತ್ತು ರಾಜಕುಮಾರ್ ಎಂದು ಗುರುತಿಸಲಾಗಿದೆ. ಘಟನಾ ಸ್ಥಳದ ಬಳಿ ಇತರ ಕಾರ್ಮಿಕರ ಅಳಲು ಮುಗಿಲುಮುಟ್ಟಿದೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version