ಪ್ರೇಮ ವೈಫಲ್ಯ: ಬೀದರ್ ಮೂಲದ ವಿದ್ಯಾರ್ಥಿನಿ ಮಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣು - Mahanayaka

ಪ್ರೇಮ ವೈಫಲ್ಯ: ಬೀದರ್ ಮೂಲದ ವಿದ್ಯಾರ್ಥಿನಿ ಮಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣು

vaishali
20/12/2021

ಉಳ್ಳಾಲ: ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭಾನುವಾರ ನಡೆದಿದ್ದು, ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಬೀದರ್ ಮೂಲದ ವಿದ್ಯಾರ್ಥಿನಿ ವೈಶಾಲಿ ಗಾಯಕ್ವಾಡ್ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ತನ್ನ ಸಹಪಾಠಿಯ ಜೊತೆಗೆ ವಾಸವಿದ್ದಳು. ಶನಿವಾರ ಇಬ್ಬರೂ ಕೂಡ ಪ್ರತ್ಯೇಕ ಕೊಠಡಿಯಲ್ಲಿ ಮಲಗಿದ್ದರು ಎನ್ನಲಾಗಿದೆ.

ಭಾನುವಾರದಂದು ವಿದ್ಯಾರ್ಥಿನಿ ರೂಮ್ ನಿಂದ ಹೊರ ಬಾರದಿದ್ದಾಗ ಸಹಪಾಠಿ ವಿದ್ಯಾರ್ಥಿನಿ ಗಾಬರಿಗೊಂಡಿದ್ದು, ಪರಿಶೀಲನೆ ನಡೆಸಿದಾಗ ಆಕೆ ಆತ್ಮಹತ್ಯೆಗೆ ಶರಣಾಗಿರುವುದು ಪತ್ತೆಯಾಗಿತ್ತು ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನೇಣು ಬಿಗಿದ ಸ್ಥಿತಿಯಲ್ಲಿ ಸ್ವಾಮೀಜಿಯ ಮೃತದೇಹ ಪತ್ತೆ!

ಸಿಎಂ ಬೊಮ್ಮಾಯಿ ಕೇಂದ್ರ ಸಚಿವರಾಗುತ್ತಾರೆ: ಅಚ್ಚರಿಗೆ ಕಾರಣವಾದ ಮುರುಗೇಶ್ ನಿರಾಣಿ ಹೇಳಿಕೆ

ಭಾರತ 400 ಬಿಲಿಯನ್ ಡಾಲರ್ ರಫ್ತು ಗುರಿಯನ್ನು ಸಾಧಿಸಲಿದೆ: ಕೇಂದ್ರ ಸಚಿವ ಪಿಯೂಷ್ ಗೋಯಲ್

ಮದುವೆ ವಿಚಾರಕ್ಕೆ ಗಲಾಟೆ: ತಂದೆಯಿಂದಲೇ ಪುತ್ರನ ಕೊಲೆ

ನೀವು ಒಬ್ಬ ವ್ಯಕ್ತಿಯ ಮುಖ ಮಾತ್ರ ತೋರಿಸುತ್ತೀರಿ, ನಿಮ್ಮ ಕಷ್ಟಕ್ಕೆ ಅವರು ಬಂದಿದ್ದಾರೆಯೇ? | ಪತ್ರಕರ್ತರಿಗೆ ರಾಹುಲ್ ಪ್ರಶ್ನೆ

ಶಿವಾಜಿ ಪ್ರತಿಮೆಗೆ ಮಸಿ ಬಳಿದಿರುವುದು ‘ಕನ್ನಡಿಗರ ವಿಕೃತ ಮನಸ್ಥಿತಿ’: ಉದ್ದವ್ ಠಾಕ್ರೆ

ಇತ್ತೀಚಿನ ಸುದ್ದಿ