4:43 PM Saturday 18 - October 2025

ಮಂಗಳೂರಿನಲ್ಲಿ ಮತ್ತೆ ರಾಗಿಂಗ್: ಖಾಸಗಿ ಕಾಲೇಜಿನ 11 ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ

11/02/2021

ಮಂಗಳೂರು: ಮಂಗಳೂರಿನ ಖಾಸಗಿ ಕಾಲೇಜಿನ 11 ವಿದ್ಯಾರ್ಥಿಗಳನ್ನು ರಾಗಿಂಗ್ ಆರೋಪದ ಮೇಲೆ  ಪೊಲೀಸರು ವಶಕ್ಕೆ ಪಡೆದಿದ್ದು, ಕಾಲೇಜಿನ ಫಿಸಿಯೋಥೆರಪಿ ಮತ್ತು ನರ್ಸಿಂಗ್ ಶಿಕ್ಷಣ ಪಡೆಯುತ್ತಿದ್ದ ಐವರು ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿದ ಆರೋಪ ಎದುರಿಸುತ್ತಿದ್ದಾರೆ.

ಮೊಹಮ್ಮದ್ ಶಮಾಸ್, ಅವಿನ್ ಜೋಯ್, ರಾಬಿನ್ ಬಿಜು, ಜೆರಾನ್ ಸಿರಿಲ್, ಜಬಿನ್ ಮಹರೂಫ್, ಮೊಹಮ್ಮದ್ ಸೂರಜ್, ಜಫಿನ್, ಅಬ್ದುಲ್ ಬಸಿತ್, ಆಶಿನ್ ಬಾಬು, ಅಬ್ದುಲ್ ಅನಾಸ್ ಮೊಹಮ್ಮದ್, ಅಕ್ಷಯ್ ಕೆ.ಎಸ್. ಬಂಧಿತ ವಿದ್ಯಾರ್ಥಿಗಳಾಗಿದ್ದಾರೆ.

ನಗರದ ಉಳ್ಳಾಲ ನಾಟೆಕಲ್ ನ ಖಾಸಗಿ ಕಾಲೇಜಿನಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.  ಕಿರಿಯ ವಿದ್ಯಾರ್ಥಿಗಳನ್ನು ಗಡ್ಡ ಬೋಳಿಸುವಂತೆ, ಬೆಂಕಿ ಪೊಟ್ಟಣ ನೀಡಿ ಕಡ್ಡಿಗಳನ್ನು ಎಣಿಸಬೇಕು ಎಂದು ಹಲವು ರೀತಿಯಲ್ಲಿ ಕಿರುಕುಳ ನೀಡಲಾಗುತ್ತಿತ್ತು ಎಂದು ದೂರಲಾಗಿದೆ. ಬಂಧಿತ ಆರೋಪಿಗಳೆಲ್ಲರೂ ಕೇರಳ ಮೂಲದವರಾಗಿದ್ದಾರೆ ಎಂದು ತಿಳಿದು ಬಂದಿದೆ.

 

ಇತ್ತೀಚಿನ ಸುದ್ದಿ

Exit mobile version