ಮಂಗಳೂರು: ಮಣಿಪುರ ಹಿಂಸಾಚಾರ ಖಂಡಿಸಿ ವಿವಿಧ ಕ್ರೈಸ್ತ ಸಂಘಟನೆಗಳಿಂದ ಪ್ರತಿಭಟನೆ - Mahanayaka
11:20 AM Tuesday 28 - October 2025

ಮಂಗಳೂರು: ಮಣಿಪುರ ಹಿಂಸಾಚಾರ ಖಂಡಿಸಿ ವಿವಿಧ ಕ್ರೈಸ್ತ ಸಂಘಟನೆಗಳಿಂದ ಪ್ರತಿಭಟನೆ

mangalore
28/07/2023

ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ ಇದರ ನೇತೃತ್ವದಲ್ಲಿ ಮಂಗಳೂರು ಧರ್ಮಕ್ಷೇತ್ರದ ಮಹಿಳಾ ಆಯೋಗ, ಕ್ರೈಸ್ತ ಐಕ್ಯತೆಯ ಆಯೋಗ, ಮಂಗಳೂರು ಕ್ರಿಶ್ಚಿಯನ್ ಕೌನ್ಸಿಲ್‌ ನ ಸಹಭಾಗಿತ್ವಲ್ಲಿ ನಗರದ ಪುರಭವನದ ಮುಂದೆ  ಮಣಿಪುರ ಹಿಂಸಾಚಾರ ಖಂಡಿಸಿ ಪ್ರತಿಭಟನೆ ನಡೆಯಿತು. ಇದೇ ವೇಳೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ

ಕರ್ನಾಟಕ ಕ್ರೈಸ್ತ ಸಂಘಟನೆಯ ಅಧ್ಯಕ್ಷ ಸ್ಟ್ಯಾನಿ ಪಿಂಟೋ ಮಾತನಾಡಿ, ಮಣಿಪುರ ಘಟನೆಯಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿಯೇ ಬೆತ್ತಲೆಯಾಗಿದ್ದಾರೆ. ಅಲ್ಲಿನ ಹಿಂಸಾಚಾರ, ದೌರ್ಜನ್ಯದ ವಿರುದ್ಧ ಜಗತ್ತಿನಾದ್ಯಂತ ನಾಗರಿಕರು ಧ್ವನಿ ಎತ್ತಿದ ಬಳಿಕ ಪ್ರಧಾನಿ ತುಟಿಬಿಚ್ಚಿರುವುದು ವಿಪರ್ಯಾಸ. ಪ್ರಧಾನಿಯ ಕ್ರಮದ ಬಗ್ಗೆ ನಮಗೆ ಯಾವುದೇ ಭರವಸೆ ನಮಗಿಲ್ಲ. ಹಾಗಾಗಿ ಹೋರಾಟ ಮುಂದುವರಿಸಲಿದ್ದೇವೆ. ಅಲ್ಲಿ ಕೆಡವಲ್ಪಟ್ಟ ಮನೆ, ಶಾಲೆಗಳನ್ನು ಮತ್ತೆ ಅಲ್ಲೇ ಕಟ್ಟುವೆವು. ಆ ಮೂಲಕ ಇತಿಹಾಸವನ್ನು ಸೃಷ್ಟಿಸುವೆವು ಎಂದರು.

ಸಾಮಾಜಿಕ ಹೋರಾಟಗಾರ್ತಿ ವಿದ್ಯಾ ದಿನಕರ್ ಮಾತನಾಡಿದರು. ರಾಜ್ಯ ದಾರಿಮೀಸ್ ಉಲಮಾ ಒಕ್ಕೂಟದ ಅಧ್ಯಕ್ಷ ಎಸ್‌.ಬಿ.ಮುಹಮ್ಮದ್ ದಾರಿಮಿ ಮಾತನಾಡಿದರು. ಮಣಿಪುರ ದೌರ್ಜನ್ಯದ ಪ್ರತ್ಯಕ್ಷ ಸಾಕ್ಷಿ, ಪಿಯು ವಿದ್ಯಾರ್ಥಿ ಡೇವಿಡ್ ಘಟನೆಯ ಬಗ್ಗೆ ವಿವರಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿhttps://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿhttps://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿhttps://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ