ಮಂಗಳೂರು ವಿವಿ ಅಂತರ್ ಕಾಲೇಜು ಮಟ್ಟದ ಅಥ್ಲೆಟಿಕ್ ಚಾಂಪಿಯನ್ ಶಿಪ್ ಗೆ ಚಾಲನೆ
ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್, ಲಯನ್ಸ್ ಕ್ಲಬ್ ಉಡುಪಿ ಅಮ್ರಿತ್ ಇವರ ವತಿಯಿಂದ ಮಂಗಳೂರು ವಿಶ್ವವಿದ್ಯಾಲಯದ ಅಂತರ್ ಕಾಲೇಜು ಪುರುಷರ ಮತ್ತು ಮಹಿಳೆಯರ “ಅಥ್ಲೆಟಿಕ್ ಚಾಂಪಿಯನ್ ಶಿಪ್, ದಿವ್ಯಾಂಗ ವಿದ್ಯಾರ್ಥಿಗಳ “ಅಥ್ಲೆಟಿಕ್ ಮೀಟ್ ಮತ್ತು ಉಡುಪಿ ಜಿಲ್ಲಾ ಕಿರಿಯರ ಅಥ್ಲೆಟಿಕ್ ಮೀಟ್ ಗೆ ಇಂದು ಅಜ್ಜರಕಾಡು ಜಿಲ್ಲಾ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು.
ಉಡುಪಿ ಶಾಸಕರಾದ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಡಾ. ಕಿಶೋರ್ ಕ್ರೀಡಾಕೂಟವನ್ನು ಉದ್ಘಾಟಿಸಿದರು.
ಡಿಸ್ಟ್ರಿಕ್ ಗವರ್ನರ್ (ಡಿಸ್ಟ್ರಿಕ್ 317A) ಲಯನ್ ಎಂ.ಕೆ ಭಟ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನುಗಾರಿಕಾ ಫೇಡರೇಶನ್ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ, ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಸಲಹೆಗಾರರಾದ ಅಶೋಕ್ ಅಡ್ಯಂತಾಯ, ಲಯನ್ಸ್ ಕ್ಲಬ್ ಉಡುಪಿ ಅಮ್ರಿತ್ (ಡಿಸ್ಟ್ರಿಕ್ 317C, ರಿಜನ್ VI, ಜೋನ್ I) ಅಧ್ಯಕ್ಷರಾದ ಜಯಪ್ರಕಾಶ್ ಭಂಡಾರಿ, ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ಕೆಂಪರಾಜ್, ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ರೋಷನ್ ಶೆಟ್ಟಿ, ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಪ್ರಾಂಶುಪಾಲರಾದ ಸುರೇಶ್ ರೈ, ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣದ ಉಪ ನಿರ್ದೇಶಕರಾದ ಗೆರಾಲ್ಡ್ ಸಂತೋಷ್ ಡಿಸೋಜಾ ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka