ಮಂಗಳೂರಿನಲ್ಲಿ ಬೀಫ್ ಸ್ಟಾಲ್ ಗೆ ಬೆಂಕಿ
09/01/2021
ಉಳ್ಳಾಲ: ಬೀಫ್ ಸ್ಟಾಲ್ ಗಳಿಗೆ ಬೆಂಕಿ ಹಚ್ಚಿದ ಘಟನೆ ಮಂಗಳೂರಿನ ತೊಕ್ಕೊಟ್ಟು ಒಳಪೇಟೆಯಲ್ಲಿ ನಡೆದಿದ್ದು, ತಾತ್ಕಾಲಿಕವಾಗಿ ನಿರ್ಮಿಸಿದ್ದ ಬೀಫ್ ಸ್ಟಾಲ್ ಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ತಿಳಿದು ಬಂದಿದೆ.
ಹಳೆಯ ಬೀಫ್ ಮಾರುಕಟ್ಟೆಯನ್ನು ಕೆಡವಿ ಹೊಸ ಮಾರುಕಟ್ಟೆ ನಿರ್ಮಾಣ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಕಾರ್ಯಾಚರಿಸುತ್ತಿದ್ದ ಅಂಗಡಿಗಳಿಗೆ ತಾತ್ಕಾಲಿಕವಾಗಿ ಸ್ಟಾಲ್ ಗಳನ್ನು ನಿರ್ಮಾಣ ಮಾಡಲಾಗಿತ್ತು. ಈ ಸ್ಟಾಲ್ ಗಳಿಗೆ ಬೆಂಕಿ ಹಚ್ಚಲಾಗಿದೆ.
ತಾತ್ಕಾಲಿಕವಾಗಿ ನಿರ್ಮಾಣ ಮಾಡಿರುವ ಬೀಫ್ ಸ್ಟಾಲ್ ಗಳನ್ನು ಮುಚ್ಚುವಂತೆ ಉಳ್ಳಾಲ ನಗರ ಸಭೆಗೆ ಕೆಲವು ಸಂಘಟನೆಗಳು ಮನವಿ ಸಲ್ಲಿಸಿದ್ದು, ಈ ನಡುವೆ ಬೀಫ್ ಸ್ಟಾಲ್ ಗಳಿಗೆ ಬೆಂಕಿ ಹಚ್ಚಲಾಗಿದೆ.
ಘಟನಾ ಸ್ಥಳಕ್ಕೆ ಉಳ್ಳಾಲ ಠಾಣೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದು, ಆರೋಪಿಗಳ ಬಂಧನಕ್ಕಾಗಿ ಶೋಧ ಆರಂಭಿಸಿದ್ದಾರೆ.