ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ದರೋಡೆಕೋರನಿಗೆ ಗುಂಡೇಟು

ಉಳ್ಳಾಲ: ಕೋಟೆಕಾರು ವ್ಯವಸಾಯ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿ ಕಣ್ಣನ್ ಮಣಿ ಎಂಬಾತ ಸ್ಥಳ ಮಹಜರು ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಕಾಲಿಗೆ ಗುಂಡು ಹಾರಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಘಟನೆಯಲ್ಲಿ ಉಳ್ಳಾಲ ಠಾಣೆಯ ಇನ್ಸ್ ಪೆಕ್ಟರ್ ಸಹಿತ ನಾಲ್ವರಿಗೆ ಗಾಯಗಳಾಗಿದ್ದು, ಎಲ್ಲರನ್ನೂ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಂಗಳವಾರ ಸಂಜೆ 4:20ರ ಸುಮಾರಿಗೆ ಕೆ.ಸಿ.ರೋಡ್ ಸಮೀಪದ ಆಲಂಕಾರು ಗುಡ್ಡೆಗೆ ಆರೋಪಿ ಕಣ್ಣನ್ ಮಣಿಯನ್ನು ಪೊಲೀಸರು ಕರೆದೊಯ್ದಿದ್ದರು. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು, ಸ್ಥಲದಲ್ಲಿದ್ದ ಒಡೆದ ಮದ್ಯದ ಬಾಟಲಿಯಿಂದ ಇಬ್ಬರು ಪೊಲೀಸರ ಮೇಲೆ ಆರೋಪಿ ಹಲ್ಲೆ ನಡೆಸಿದ್ದಾನೆ. ಉಳ್ಳಾಲ ಠಾಣೆಯ ಇನ್ಸ್ ಪೆಕ್ಟರ್ ಬಾಲಕೃಷ್ಣ ಅವರನ್ನು ದೂಡಿ ಹಾಕಿ ಹಲ್ಲೆ ನಡೆಸಲು ಮುಂದಾಗಿದ್ದಾನೆ. ಈ ವೇಲೆ ಸಿಸಿಬಿ ನಿರೀಕ್ಷಕರು ಗಾಳಿಯಲ್ಲಿ ಗುಂಡು ಹಾರಿಸಿ, ಆರೋಪಿಗೆ ಶರಣಾಗುವಂತೆ ಎಚ್ಚರಿಕೆ ನೀಡಿದರೂ ಆರೋಪಿ ನಿರ್ಲಕ್ಷಿಸಿದ್ದು, ಈ ವೇಳೆ ಮೊಣಕಾಲಿಗೆ ಗುಂಡು ಹಾರಿಸಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.
ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜ.17ರಂದು ತಮಿಳುನಾಡಿನಲ್ಲಿ ಮಂಗಳೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದರು. ಬಂಧಿತರಿಂದ ಕಾರು, ಕಳವು ಮಾಡಲಾದ ಎರಡು ಗೋಣಿ ಚಿನ್ನ, ಎರಡು ತಲವಾರ, ಪಿಸ್ತೂಲು, 3 ಸಜೀವ ಮದ್ದುಗುಂಡು ವಶಪಡಿಸಿಕೊಳ್ಳಲಾಗಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: