10:23 AM Saturday 23 - August 2025

ಹಣ ಕೊಡ್ತೀಯಾ, ಇಲ್ಲ ಶೂಟ್ ಮಾಡ್ಬೇಕಾ?: ಮಂಗಳೂರಿನಲ್ಲಿ ಅಂಗಡಿ ಮಾಲಿಕನಿಗೆ ಬೆದರಿಕೆ!

mangaluru
24/01/2023

ಮಂಗಳೂರು: ಉದ್ಯಮಿಗೆ ದುಷ್ಕರ್ಮಿಗಳ ತಂಡವೊಂದು ಜೀವ ಬೆದರಿಕೆ ಹಾಕಿರುವ ಘಟನೆ ಮಂಗಳೂರಲ್ಲಿ ಬೆಳಕಿಗೆ ಬಂದಿದ್ದು, ಈ‌ ಕುರಿತು ಮಂಗಳೂರಿನ ಬಂದರು ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಬಂದರು ಎಂಬ ಪ್ರದೇಶದಲ್ಲಿರುವ ಪಟಾಕಿ ಅಂಗಡಿ ಮಾಲಕ ಮುರಳೀಧರ ಪೈಗೆ ರವಿವಾರ ಸಂಜೆ 6:30ಕ್ಕೆ  ಕರೆ ಮಾಡಿದ ವ್ಯಕ್ತಿಯೊಬ್ಬ 5 ಲಕ್ಷ ರೂಪಾಯಿ ಮೌಲ್ಯದ ಪಟಾಕಿ ಬೇಕಾಗಿದೆ. ನಗರದ ಹೋಟೆಲ್ ಗೆ ಬರಬೇಕೆಂದು ಸೂಚಿಸಿದ್ದ ಎನ್ನಲಾಗಿದೆ. ಅಲ್ಲಿಗೆ ಬರಲು ಸಾಧ್ಯವಿಲ್ಲ ಎಂದು‌‌ ಮುರಳೀಧರ ಪೈ ತಿಳಿಸಿದ್ದರು ಎಂದು ಹೇಳಲಾಗಿದೆ. ಸೋಮವಾರ ಮಧ್ಯಾಹ್ನ 2ಕ್ಕೆ ಮುರಳೀಧರ ಪೈ ತನ್ನ ಅಂಗಡಿಯಲ್ಲಿದ್ದಾಗ ತನ್ನ ಪರಿಚಯಸ್ಥರೇ ಆದ ದಿನೇಶ್ ಶೆಟ್ಟಿ ಹಾಗೂ ಇತರ 4 ಮಂದಿ‌ ಏಕಾಏಕಿ ಅಂಗಡಿಗೆ ನುಗ್ಗಿ 5 ಲಕ್ಷ ರೂಪಾಯಿ ಹಣ ಕೊಡಬೇಕು. ಇಲ್ಲವಾದರೆ ಶೂಟ್ ಮಾಡಿ ಕೊಲ್ಲುವುದಾಗಿ ಬೆದರಿಕೆಯೊಡ್ಡಿ ಕೆನ್ನೆಗೆ ಹೊಡೆದು ಕಾಲಿನಿಂದ ತುಳಿದು ಹಲ್ಲೆ ನಡೆಸಿದ್ದಾರೆ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

ಈ ಕೃತ್ಯದ ಹಿಂದೆ ಭೂಗತ ಲೋಕದ ಪಾತಕಿಯೊಬ್ಬನ ಕೈವಾಡ ಇರಬಹುದೆಂಬ ಶಂಕೆ ವ್ಯಕ್ತವಾಗಿದೆ. ಬಂದರು ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version