11:49 AM Saturday 12 - September 2026

ಮಂಗಳೂರು: ಮಾದಕ ವಸ್ತು ತಪಾಸಣಾ ಅಭಿಯಾನ ಯಶಸ್ವಿ, ಮರುಪರೀಕ್ಷೆಯಲ್ಲಿ 38 ವಿದ್ಯಾರ್ಥಿಗಳಿಗೆ ನೆಗೆಟಿವ್ ವರದಿ

drug testing
12/09/2026

ಮಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ಪೊಲೀಸ್ ಇಲಾಖೆ ಹಮ್ಮಿಕೊಂಡಿರುವ ವಿಶೇಷ ತಪಾಸಣಾ ಅಭಿಯಾನವು ಸಕಾರಾತ್ಮಕ ಫಲಿತಾಂಶ ನೀಡುತ್ತಿದ್ದು, ಮೊದಲ ಹಂತದಲ್ಲಿ ಪಾಸಿಟಿವ್ ಬಂದಿದ್ದ ಶೇ. 75 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮರುಪರೀಕ್ಷೆಯಲ್ಲಿ ನೆಗೆಟಿವ್ ವರದಿ ಪಡೆಯುವ ಮೂಲಕ ಮಾದಕ ವ್ಯಸನದಿಂದ ಹೊರಬಂದಿದ್ದಾರೆ.

ಈ ವರ್ಷ ನಗರದ 150 ಕಾಲೇಜುಗಳ ಒಟ್ಟು 8,310 ವಿದ್ಯಾರ್ಥಿಗಳನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಆರಂಭದಲ್ಲಿ 98 ವಿದ್ಯಾರ್ಥಿಗಳಲ್ಲಿ ಮಾದಕ ವಸ್ತು ಬಳಕೆ ದೃಢಪಟ್ಟಿತ್ತು. ಈ ವಿದ್ಯಾರ್ಥಿಗಳಿಗೆ ಕಾಲೇಜು ಆಡಳಿತ ಮಂಡಳಿ ಹಾಗೂ ಪೋಷಕರ ಮೂಲಕ ವಿಶೇಷ ಸಮಾಲೋಚನೆ ನಡೆಸಲಾಗಿತ್ತು.

ಗುರುವಾರ ನಡೆದ ಮರುಪರೀಕ್ಷಾ ಅಭಿಯಾನದಲ್ಲಿ ಮೊದಲ ಹಂತದಲ್ಲಿದ್ದ 50 ವಿದ್ಯಾರ್ಥಿಗಳನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಅದರಲ್ಲಿ 38 ವಿದ್ಯಾರ್ಥಿಗಳ ಫಲಿತಾಂಶ ನೆಗೆಟಿವ್ ಬಂದಿದೆ. ತಾವೀಗ ಮಾದಕ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸಿರುವುದಾಗಿ ಈ ವಿದ್ಯಾರ್ಥಿಗಳು ತಿಳಿಸಿದ್ದು, ಇದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಅದೇ ವೇಳೆ, ಮರುಪರೀಕ್ಷೆಗೊಳಪಟ್ಟ 50 ಮಂದಿಯ ಪೈಕಿ ಇನ್ನೂ 12 ವಿದ್ಯಾರ್ಥಿಗಳಲ್ಲಿ ಪಾಸಿಟಿವ್ ಫಲಿತಾಂಶ ಮುಂದುವರಿದಿದೆ. ಈ ವಿದ್ಯಾರ್ಥಿಗಳ ಸಮಾಲೋಚನಾ ಪ್ರಕ್ರಿಯೆಯನ್ನು ಪೋಷಕರು ಹಾಗೂ ಕಾಲೇಜು ಆಡಳಿತ ಮಂಡಳಿಗಳು ಹೆಚ್ಚಿನ ನಿಗಾದೊಂದಿಗೆ ಮುಂದುವರಿಸುವಂತೆ ಸೂಚಿಸಲಾಗಿದೆ. ವಿದ್ಯಾರ್ಥಿಗಳನ್ನು ಮಾದಕ ವಸ್ತುಗಳ ಬಳಕೆಯಿಂದ ದೂರವಿಡುವಲ್ಲಿ ಕೇವಲ ಪರೀಕ್ಷೆಗಿಂತಲೂ ನಿರಂತರ ಸಮಾಲೋಚನೆ, ಪೋಷಕರ ಮೇಲ್ವಿಚಾರಣೆ ಮತ್ತು ಕಾಲೇಜುಗಳ ಜವಾಬ್ದಾರಿಯುತ ಅನುಸರಣೆ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler deneme bonusu veren siteler
Exit mobile version