ಮಂಗಳೂರು: ಬಾಂಗ್ಲಾ ದೇಶದ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ - Mahanayaka
10:49 PM Thursday 21 - August 2025

ಮಂಗಳೂರು: ಬಾಂಗ್ಲಾ ದೇಶದ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

hindu hitharakshana samiti
04/12/2024


Provided by

ಮಂಗಳೂರು: ಹಿಂದೂ ಹಿತರಕ್ಷಣಾ ಸಮಿತಿ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ, ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ಒತ್ತಾಯಿಸಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ವಿಶ್ವ ಹಿಂದೂ ಪರಿಷತ್ ಪ್ರಾಂತ ಕಾರ್ಯದರ್ಶಿ ಶರಣ್ ಪಂಪ್ ವೆಲ್,  ಶ್ರೀ ರಾಜಶೇಖರಾನಂದ ಸ್ವಾಮೀಜಿ ವಜ್ರದೇಹಿ ಮಠ ಗುರುಪುರ, ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಶ್ರೀಧಾಮ ಮಾಣಿಲ, ಶ್ರೀ ವಿದ್ಯೇಂದ್ರ ತೀರ್ಥರು ಚಿತ್ರಾಪುರ, ಶ್ರೀಸನಂದ ಸ್ವಾಮೀಜಿ ಇಸ್ಕಾನ್ ಕಲಾ ಕುಂಜ,  ಶ್ರೀ ಪ್ರೇಮ್ ಭಕ್ತಿ ಪ್ರಭು ಇಸ್ಕಾನ್ ಕುಡುಪು, ಶ್ರೀ ಸಚ್ಚಿದಾನಂದ ಅದ್ವೈತ ಸ್ವಾಮೀಜಿ ಕುಳಾಯಿ, ಶ್ರೀನಾಮನಿಷ್ಠ ಸ್ವಾಮೀಜಿ ಇಸ್ಕಾನ್, ಹಿಂದೂ ಜಾಗರಣಾ ವೇದಿಕೆಯ ಪ್ರಾಂತ ಕಾರ್ಯಕಾರಿಣಿ ಸದಸ್ಯ ಶ್ರೀಕಾಂತ ಶೆಟ್ಟಿ ಕಾರ್ಕಳ, ಹಿಂದೂ ಹಿತರಕ್ಷಣ ಸಮಿತಿ ಅಧ್ಯಕ್ಷ ಹೆಚ್.ಕೆ.ಪುರುಷೋತಮ್, ಹಿಂದೂ ಜಾಗರಣಾ ವೇದಿಕೆ ಪ್ರಾಂತ ನಿಧಿ ಪ್ರಮುಖ್ ರವಿರಾಜ್ ಕಡಬ ಭಾಗಿಯಾಗಿದ್ದರು.

ಪ್ರತಿಭಟನೆಗೂ ಮೊದಲು ಅಂಬೇಡ್ಕರ್ ವೃತ್ತದಿಂದ ಮಿನಿ ವಿಧಾನಸೌಧವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು.  ಪ್ರತಿಭಟನೆಯ ವೇಳೆ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಮನವಿ ಪತ್ರ ಸಲ್ಲಿಸಲಾಯಿತು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ